ಶಿವಮೊಗ್ಗ ವಿಮಾನ ನಿಲ್ದಾಣ ಮಲೆನಾಡಿನ ಹೆಬ್ಬಾಗಿಲು ಆಗಲಿದೆ: ಸಿಎಂ ಬೊಮ್ಮಾಯಿ

ಶಿವಮೊಗ್ಗ ವಿಮಾನ ನಿಲ್ದಾಣ ಮಲೆನಾಡಿನ ಹೆಬ್ಬಾಗಿಲು ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
 

Share this Video
  • FB
  • Linkdin
  • Whatsapp

ಶಿವಮೊಗ್ಗ ವಿಮಾನ ನಿಲ್ದಾಣ ಕೇವಲ ಬೆಂಗಳೂರಿಗೆ ಮಾತ್ರ ಅಲ್ಲ, ದೇಶದ ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಶಿವಮೊಗ್ಗ ಏರ್‌ಪೋರ್ಟ್‌ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಂಗಳೂರು ಮತ್ತು ಉತ್ತರ ಕನ್ನಡ ಬಂದರು ಅಭಿವೃದ್ಧಿಗೆ ಅನುದಾನ ಬಿಡುಗಡೆ ಆಗಿದೆ. ಮಾರ್ಚ್ 11ರಂದು ಬೆಂಗಳೂರು-ಮೈಸೂರು ಹೆದ್ದಾರಿ ಆಗಲಿದೆ. ಈ ಎಲ್ಲಾ ಅಭಿವೃದ್ಧಿಗೂ ನಮ್ಮ ಡಬಲ್ ಎಂಜಿನ್ ಸರ್ಕಾರ ಕಾರಣ ಎಂದು ಪ್ರಧಾನಿಗಳನ್ನು ಸಿಎಂ ಬೊಮ್ಮಾಯಿ ಹಾಡಿ ಹೊಗಳಿದರು. ಹಾಗೆ ಬಿ.ಎಸ್ ಯಡಿಯೂರಪ್ಪ ಅವರನ್ನು ಹೊಗಳಿದ ಬಸವರಾಜ ಬೊಮ್ಮಾಯಿ, ಸೂರ್ಯ-ಚಂದ್ರ ಇರೋವರೆಗೂ ಅವರ ಯೋಜನೆಗಳು ಇರಲಿದೆ ಎಂದು ಹೇಳಿದರು.

ಬೆಳಗಾವಿಯಲ್ಲಿ ಅಭಿವೃದ್ಧಿ ಪರ್ವ: ಸಾವಿರಾರು ಕೋಟಿ ರೂ. ಕಾಮಗಾರಿಗೆ 'ಮೋ ...

Related Video