ಪೌರತ್ವ ಕಾಯ್ದೆ ವಿರೋಧಿಸಿ ಬಾಗಲಕೋಟೆಯಲ್ಲಿ ಬೃಹತ್ ಪ್ರತಿಭಟನೆ

ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ| ದಲಿತ ಸಂಘರ್ಷ ಭೀಮವಾದ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಸೇರಿ ಹಲವು ಮುಸ್ಲಿಂ ಸಂಘಟನೆಗಳ ನೇತೃತ್ವದಲ್ಲಿ ನಡೆದ ಪ್ರತಿಭಟನೆ| ನವನಗರದ ಜಿಲ್ಲಾಡಳಿತ ಭವದನದ ಎದುರು ಪ್ರತಿಭಟನೆ| ಪ್ರತಿಭಟನೆಯಲ್ಲಿ ಮೋದಿ, ಕೇಂದ್ರ ಅಮಿತ್ ಶಾ ವಿರುದ್ಧ ಧಿಕ್ಕಾರ|

First Published Jan 17, 2020, 2:46 PM IST | Last Updated Jan 17, 2020, 2:46 PM IST

ಬಾಗಲಕೋಟೆ(ಜ.17): ಪೌರತ್ವ ಕಾಯ್ದೆಯನ್ನ ವಿರೋಧಿಸಿ ದಲಿತ ಸಂಘರ್ಷ ಭೀಮವಾದ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಸೇರಿ ಹಲವು ಮುಸ್ಲಿಂ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಇಂದು(ಗುರುವಾರ) ನಗರದಲ್ಲಿ ನಡೆದಿದೆ. ನವನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮೂಲಕ ಜಿಲ್ಲಾಡಳಿತ ಭವದನದ ಎದುರು ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರ ವಿರುದ್ಧ ಆಕ್ರೋಷ ವ್ಯಕ್ತಪಡಿಸಿದ್ದಾರೆ.  

ಪ್ರತಿಭಟನೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನಾಕಾರರ ಆಕ್ರೋಶ ಪಡಿಸಿದ್ದಾರೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಭವನದ ಬಳಿ ಬಿಗಿ ಪೋಲಿಸ್‌ ಭದ್ರತೆ ಕಲ್ಪಿಸಲಾಗಿದೆ.