ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ಶಿಷ್ಯ ಸ್ವೀಕಾರ ಮಹೋತ್ಸವ: ಸ್ವರ್ಣವಲ್ಲಿ ನೂತನ ಯತಿಗಳಿಗೆ ಸನ್ಯಾಸ ದೀಕ್ಷೆ

ಉತ್ತರಕನ್ನಡ ಜಿಲ್ಲೆಯ ಶಿರಸಿಯ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ  ಶಿಷ್ಯ ಸ್ವೀಕಾರ ಮಹೋತ್ಸವ ಕಾರ್ಯಕ್ರಮ ಸಂಭ್ರಮದಿಂದ ನೆರವೇರಿತು. 
 

First Published Feb 23, 2024, 12:28 PM IST | Last Updated Feb 23, 2024, 12:29 PM IST

ಉತ್ತರಕನ್ನಡ ಜಿಲ್ಲೆಯ ಶಿರಸಿ(Sirsi) ತಾಲೂಕಿನ ಸೋಂದಾ ಸ್ವರ್ಣವಲ್ಲಿ ಮಹಾ ಸಂಸ್ಥಾನದಲ್ಲಿ(Swarnavalli Mahasansthan) ಶಿಷ್ಯ ಸ್ವೀಕಾರ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. 55ನೇ ಯತಿಗಳಾಗಿ‌ ಬ್ರಹ್ಮಚಾರಿ ವಿದ್ವಾನ್ ನಾಗರಾಜ್ ಭಟ್ಟ ಗಂಗೆಮನೆ ಸನ್ಯಾಸ ಗ್ರಹಣ‌ ಮಾಡಿದರು. ಸ್ವರ್ಣವಲ್ಲೀ ಮಠದ  ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಗಂಗಾಧರೇಂದ್ರ ಸರಸ್ವತೀ‌ ಮಹಾ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ವಿವಿಧ ಧಾರ್ಮಿಕ ಹಾಗೂ ಸನ್ಯಾಸ ಗ್ರಹಣದ ವಿಧಿ ವಿಧಾನಗಳು ನಡೆದವು. ಮಠದಿಂದ ಸುಮಾರು ಒಂದು‌ ಕಿಲೋ ಮೀಟರ್ ದೂರದ ಶಾಲ್ಮಲಾ‌ ನದಿಯ ಬಳಿ ಸನ್ಯಾಸ ದೀಕ್ಷೆ ನೀಡುವ ಕಾರ್ಯಕ್ರಮ ನಡೆಯಿತು. ಸ್ವರ್ಣವಲ್ಲೀ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳು ನೂತನ ಯತಿಗೆ  ಕಾಷಾಯ ವಸ್ತ್ರ ನೀಡಿದರು. ಬಳಿಕ ಶಂಖ ಸ್ನಾನ, ಪ್ರಣವ ಮಹಾ ವಾಕ್ಯೋಪದೇಶ ನೀಡಿ ನೂತನ ಶ್ರೀಗಳಿಗೆ ಶ್ರೀಆನಂದ ಬೋಧೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳು ಎಂದು ಸ್ವರ್ಣವಲ್ಲೀ ಶ್ರೀಗಳು ನಾಮಕರಣ‌ ಮಾಡಿದರು.ಕಾರ್ಯಕ್ರಮದಲ್ಲಿ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಮತ್ತು ಕಿರಿಯ ಸ್ವಾಮೀಜಿ ಆನಂದ ಬೋಧೇಂದ್ರ ಸರಸ್ವತಿ ಸ್ವಾಮೀಜಿ ಆಶಿರ್ವಚನ ನೀಡಿದರು. ವಿವಿಧ ಮಠದ ಸ್ವಾಮೀಜಿಗಳು, ಮುವತ್ತು ಸಾವಿರಕ್ಕೂ ಹೆಚ್ಚು ಭಕ್ತರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು. 

ಇದನ್ನೂ ವೀಕ್ಷಿಸಿ:  Rajamouli- Mahesh Babu: ನಟ ಮಹೇಶ್‌ ಬಾಬುಗೆ ಖಡಕ್‌ ಸೂಚನೆ ಕೊಟ್ಟ ರಾಜಮೌಳಿ: ಏನದು ಗೊತ್ತಾ ?

Video Top Stories