Asianet Suvarna News Asianet Suvarna News

'ಕನ್ನಡಪ್ರಭ' ಬೆಳಗಾವಿ ಆವೃತ್ತಿಗೆ ರಜತ ಸಂಭ್ರಮ: 24 ಮಂದಿಗೆ ಪ್ರಶಸ್ತಿ ಪ್ರದಾನ

ಬೆಳಗಾವಿ ಭಾಗದ 24 ಗಣ್ಯರಿಗೆ ಕನ್ನಡಪ್ರಭ ಹಾಗೂ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವತಿಯಿಂದ ‘ರಜತ ಸಾಧಕರು’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
 

ಕನ್ನಡಪ್ರಭ ದಿನಪತ್ರಿಕೆಯ ಬೆಳಗಾವಿ ಆವೃತ್ತಿ 25 ವರ್ಷಗಳನ್ನು ಪೂರೈಸಿದ ಹಿನ್ನೆಲೆ, ಬೆಂಗಳೂರಿನಲ್ಲಿ ಸಮಾರಂಭ ಏರ್ಪಡಿಸಲಾಗಿತ್ತು. ಇದೇ ವೇಳೆ, ವಿವಿಧ ಕ್ಷೇತ್ರಗಳಲ್ಲಿ ಅಪೂರ್ವ ಸಾಧನೆಗೈದ ಬೆಳಗಾವಿ ಆವೃತ್ತಿಯ ಮೂರು ಜಿಲ್ಲೆಗಳ 24 ಗಣ್ಯರಿಗೆ ‘ರಜತ ಸಾಧಕರು’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ವೇಳೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ, ಐಟಿ-ಬಿಟಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ ಸಿ.ಎನ್‌.ಅಶ್ವತ್ಥನಾರಾಯಣ, ಕನ್ನಡಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ ಸೇರಿ ಮತ್ತಿತರರು ಉಪಸ್ಥಿತರಿದ್ದರು.