ಪೊಲೀಸ್‌ ಠಾಣೆಯಲ್ಲೇ ಕುಚ್‌ಕುಚ್‌: ಅಯ್ಯೋ ರಾಮಚಂದ್ರ... ಪರಮೇಶ್ವರನ ಭಯವೂ ನಿನಗೆ ಇಲ್ಲದಾಯಿತೇ!

ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ದೂರು ನೀಡಲು ಬಂದ ಮಹಿಳೆಯೊಂದಿಗೆ ಕಚೇರಿಯಲ್ಲಿ ರಾಸಲೀಲೆ ನಡೆಸಿ ಸಿಕ್ಕಿಬಿದ್ದಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಡಿವೈಎಸ್ಪಿ ನಾಪತ್ತೆಯಾಗಿದ್ದಾರೆ.

First Published Jan 3, 2025, 5:55 PM IST | Last Updated Jan 3, 2025, 5:55 PM IST

ಬೆಂಗಳೂರು (ಜ.3):ದೂರು ಕೊಡಲು ಬಂದ ಮಹಿಳೆ ಜೊತೆ ಕಚೇರಿಯಲ್ಲೇ ಡಿವೈಎಸ್‌ಪಿ ರಾಸಲೀಲೆ ನಡೆಸಿದ್ದಾನೆ. ಡಿವೈಎಸ್ ಪಿ ರಾಸಲೀಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲಿಯೇ ಪೊಲೀಸ್‌ ನಾಪತ್ತೆಯಾಗಿದ್ದಾನೆ.

ಮಧುಗಿರಿ ಡಿವೈಎಸ್ ಪಿ ರಾಮಚಂದ್ರಪ್ಪ ಕಚೇರಿಯಲ್ಲೇ ಮಹಿಳೆ ಜೊತೆ ರಾಸಲೀಲೆ ನಡೆಸಿ ಸಿಕ್ಕಿಬಿದ್ದಿದ್ದಾರೆ. ದೂರು ನೀಡಲು ಪೊಲೀಸ್ ಠಾಣೆಗೆ ಬಂದ ಮಹಿಳೆಯನ್ನೇ ಪುಸಲಾಯಿಸಿ ಕುಚ್‌ಕುಚ್‌ ನಡೆಸಿದ್ದಾನೆ. ಪಾವಗಡ ಮೂಲದ ಮಹಿಳೆ ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಲು ಬಂದಾಗ ಇದು ಬಹಿರಗವಾಗಿದೆ.

ಪೊಲೀಸ್ ಠಾಣೆಗೆ ದೂರು ಕೊಡಲು ಬಂದ ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ ಡಿವೈಎಸ್‌ಪಿ; ವಿಡಿಯೋ ವೈರಲ್!

ಮಾತುಕತೆ ನಡೆಸಲು ಡಿವೈಎಸ್ ಪಿ ಕಚೇರಿಗೆ ಬಂದಿದ್ದರು. ಈ ವೇಳೆ ಮಹಿಳೆಯನ್ನ ಪುಸಲಾಯಿಸಿದ್ದಾರೆ. ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋಗಿ ಲೈಂಗಿಕ ಕ್ರಿಯೆ ನಡೆಸುವ ಪ್ರಯತ್ನ ಮಾಡಿದ್ದಾರೆ. ಇದು ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಈ  ಘಟನೆಯಿಂದ ಇಡೀ ಪೊಲೀಸ್ ಇಲಾಖೆಯೇ ತಲೆತಗ್ಗಿಸುವಂತಾಗಿದೆ.