ಕಾಫಿ ನಾಡಿನಲ್ಲೀಗ ಇಲಿಜ್ವರದ ಭೀತಿ..!

ಜಿಲ್ಲೆಯ ಎನ್‌.ಆರ್‌.ಪುರ ತಾಲೂಕಿನಲ್ಲಿ ಇದೀಗ ಇಲಿ ಜ್ವರದ ಭೀತಿ ಎದುರಾಗಿದೆ. ತಾಲೂಕಿನ ಇಬ್ಬರಲ್ಲಿ ಇಲಿ ಜ್ವರ ಇರುವುದು ಪತ್ತೆಯಾಗಿದೆ. ಈ ಪೈಕಿ ಒಬ್ಬರು ಮೃತಪಟ್ಟಿದ್ದರೆ, ಮತ್ತೊಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲಿ ಜ್ವರದಿಂದಲೇ ಈ ವ್ಯಕ್ತಿ ಮೃತಪಟ್ಟಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ.

Share this Video
  • FB
  • Linkdin
  • Whatsapp

ಚಿಕ್ಕಮಗಳೂರು(ಜು.31): ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಂಗನಕಾಯಿಲೆಯ ಭೀತಿಯಿಂದ ಹೊರಬರುವಷ್ಟರಲ್ಲೇ ಕೊರೋನಾ ಸೋಂಕು ವಕ್ಕರಿಸಿತ್ತು. ಇದರ ಬೆನ್ನಲ್ಲೇ ಮತ್ತೊಂದು ಶಾಕ್ ಮಲೆನಾಡಿನ ಮಂದಿಗೆ ಎದುರಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೌದು, ಜಿಲ್ಲೆಯ ಎನ್‌.ಆರ್‌.ಪುರ ತಾಲೂಕಿನಲ್ಲಿ ಇದೀಗ ಇಲಿ ಜ್ವರದ ಭೀತಿ ಎದುರಾಗಿದೆ. ತಾಲೂಕಿನ ಇಬ್ಬರಲ್ಲಿ ಇಲಿ ಜ್ವರ ಇರುವುದು ಪತ್ತೆಯಾಗಿದೆ. ಈ ಪೈಕಿ ಒಬ್ಬರು ಮೃತಪಟ್ಟಿದ್ದರೆ, ಮತ್ತೊಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲಿ ಜ್ವರದಿಂದಲೇ ಈ ವ್ಯಕ್ತಿ ಮೃತಪಟ್ಟಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ.

ಕೋವಿಡ್‌ ನೆಗೆಟಿವ್‌ ಬಂದ್ರೂ ಚಿಕಿತ್ಸೆ ನೀಡಲು ಹಿಂದೇಟು: ಶವ ಸಮೇತ ಡಿಸಿ ಕಚೇರಿಗೆ ಬಂದ ಬಂಧುಗಳು

ಸಾಮಾನ್ಯವಾಗಿ ಡಿಸೆಂಬರ್‌ನಿಂದ ಮೇ ವೇಳೆಯಲ್ಲಿ ಇಲಿ ಜ್ವರ ಕಾಣಿಸಿಕೊಳ್ಳುತ್ತದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈಗಾಗಲೇ ಶಂಕಿತರಿಂದ ರಕ್ತದ ಮಾದರಿ ಸಂಗ್ರಹಿಸಿ ಶಿವಮೊಗ್ಗ ಇಲ್ಲವೇ ಉಡುಪಿ ಲ್ಯಾಬ್‌ಗಳಿಗೆ ಕಳಿಸಿ ಆ ಬಳಿಕವಷ್ಟೇ ಖಚಿತವಾಗಿ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

Related Video