Asianet Suvarna News Asianet Suvarna News

ಸಿಎಂ ಬೇಗ ಗುಣಮುಖರಾಗಲೆಂದು ಮುಸ್ಲಿಂ ಬಾಂಧವರಿಂದ ದರ್ಗಾದಲ್ಲಿ ಪ್ರಾರ್ಥನೆ

Aug 5, 2020, 8:44 PM IST

ಶಿವಮೊಗ್ಗ, (ಆ.05): ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೊರೋನಾ ಸೋಂಕಿನಿಂದ ಶೀಘ್ರ ಗುಣಮುಖರಾಗಲಿ ಎಂದು ಮುಸ್ಲಿಂ ಬಾಂಧವರು ದರ್ಗಾದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.

ಬಿಎಸ್‌ವೈ ಶೀಘ್ರ ಗುಣಮುಖರಾಗಲು ಸಚಿವ ಪ್ರಭು ಚವ್ಹಾಣ್‌ರಿಂದ ವಿಶೇಷ ಪೂಜೆ

ನಗರದ ಕೋರ್ಟ್ ವೃತ್ತದ ಬಳಿ ಇರುವ ಹಜ್ರತ್ ಸಯ್ಯದ್ ಶಾ ಅಲೀಂ ದಿವಾನ್ ದರ್ಗಾದಲ್ಲಿ ಮುಸ್ಲಿಂ ಬಾಂಧವರು ಪೂಜೆ ಸಲ್ಲಿಸಿದರು. ಅಲ್ಲಾಗೆ ಹೂವಿನ ಚಾದರ ಹಾಸುವ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕೊರೊನಾದಿಂದ ಬೇಗ ಗುಣಮುಖರಾಗಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.