ಸುರತ್ಕಲ್ ಬೀಚ್‌ನಲ್ಲಿ ಅಪರೂಪದ ಮೀನು ಪತ್ತೆ: ಕಪ್ಪು ಚುಕ್ಕೆಗಳಿಂದ ಹಾವಿನಂತಿರುವ ಮೀನು..!
ಈಲ್ಸ್ ಹೆಸರಿನ ಅಪರೂಪದ ಮೀನು ಸುರತ್ಕಲ್ ಬೀಚ್ ನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮಂಗಳೂರು: ಇಲ್ಲಿನ ಸುರತ್ಕಲ್ ಬೀಚ್‌ನಲ್ಲಿ(Suratkal Beach) ಅಪರೂಪದ ಮೀನು(Fish) ಪತ್ತೆಯಾಗಿದ್ದು, ಅದು ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿದೆ. ಸ್ಪಾಟೆಡ್ ಮೊರೈ ಈಲ್ಸ್(Spotted Moray Eels) ಹೆಸರಿನ ಅಪರೂಪದ ಮೀನು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಪ್ಪು ಚುಕ್ಕೆಗಳಿಂದ ಆಕರ್ಷಣೀಯವಾಗಿ ಈ ಮೀನು ಕಾಣುತ್ತದೆ. ದ್ವೀಪದ ಬಳಿಯ ಹವಳ ದಿಬ್ಬದಂತಹ ಸ್ಥಳಗಳಲ್ಲಿ ಈ ಮೀನು ವಾಸ ಮಾಡುತ್ತದೆ. ಪ್ರಕ್ಷುಬ್ಧವಾದ ಕಡಲಿನ ಅಬ್ಬರದಿಂದ ತೀರಕ್ಕೆ ಬಂದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯವಾಗಿ ಈ ಮೀನನ್ನು ಆರೋಳಿ ಎಂದು ಕರೆಯಲಾಗುತ್ತದೆ. ಅಲ್ಲದೇ ಈ ಮೀನನ್ನು ಸ್ಥಳೀಯರು ತಿನ್ನಲ್ಲ ಎಂದು ಮೀನುಗಾರರು ಮಾಹಿತಿ ನೀಡಿದ್ದಾರೆ.
ಇದನ್ನೂ ವೀಕ್ಷಿಸಿ: ಮಹಿಳೆಯರ ರೀತಿ ಪುರುಷರಿಗೂ ಗೃಹಲಕ್ಷ್ಮಿ ಯೋಜನೆ ಜಾರಿ ಮಾಡಿ: ವಾಟಾಳ್ ನಾಗರಾಜ್