Asianet Suvarna News Asianet Suvarna News

ಶ್ರೀ ಗುರು ರಾಘವೇಂದ್ರ ಬ್ಯಾಂಕ್ ಮಹಾ ವಂಚನೆ : ಕೋಟಿ ಕೋಟಿ ಪಂಗನಾಮ

ಹನ್ನೊಂದು ವರ್ಷದ ಅವಧಿಯಲ್ಲಿ ಬೆಂಗಳೂರಿನ ಬಸವನಗುಡಿಯ ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ಸುಮಾರು 923 ಕೋಟಿ ರು.  ನಷ್ಟು ಅಕ್ರಮ ನಡೆದಿದೆ ಎಂದು ರಾಜ್ಯ ಅಪರಾಧ ತನಿಖಾ ದಳ (ಸಿಐಡಿ) ತನಿಖೆಯಲ್ಲಿ ಬೆಳಕಿಗೆ ಬಂದಿದೆ.

 ಈ ಬ್ಯಾಂಕ್‌ನಲ್ಲಿ 2009ರಿಂದ 2020ರ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಣಕಾಸು ಅವ್ಯವಹಾರ ಕುರಿತು ಶೋಧಿಸಿರುವ ಸಿಐಡಿ, ಈಗ ವರ್ಷವಾರು ಲೆಕ್ಕಪರಿಶೋಧನೆ ನಡೆಸಿ ಪ್ರತ್ಯೇಕ ಆರೋಪ ಪಟ್ಟಿ ಸಲ್ಲಿಸಲು ನಿರ್ಧರಿಸಿದೆ. ಅಂತೆಯೇ 2009-10ನೇ ಸಾಲಿನಲ್ಲಿ  60 ರು.  ಕೋಟಿ ಅಕ್ರಮ ನಡೆದಿದೆ ಎಂದು ಬ್ಯಾಂಕ್‌ನ ಮಾಜಿ ಅಧ್ಯಕ್ಷ ರಾಮಕೃಷ್ಣಯ್ಯ ಸೇರಿದಂತೆ 28 ಜನ ಆರೋಪಿಗಳ ವಿರುದ್ಧ ಸಿಐಡಿ ವಿಶೇಷ ನ್ಯಾಯಾಲಯಕ್ಕೆ ಮೊದಲ ಹಂತದ ಆರೋಪ ಪಟ್ಟಿಯನ್ನು ಸಲ್ಲಿಸಿದೆ ಎಂದು ಅಧಿಕಾರಿಗಳು  ತಿಳಿಸಿದ್ದಾರೆ. 

ಬೆಂಗಳೂರು (ಸೆ.04):  ಹನ್ನೊಂದು ವರ್ಷದ ಅವಧಿಯಲ್ಲಿ ಬೆಂಗಳೂರಿನ ಬಸವನಗುಡಿಯ ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ಸುಮಾರು 923 ಕೋಟಿ ರು.  ನಷ್ಟು ಅಕ್ರಮ ನಡೆದಿದೆ ಎಂದು ರಾಜ್ಯ ಅಪರಾಧ ತನಿಖಾ ದಳ (ಸಿಐಡಿ) ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ರಾಘವೇಂದ್ರ ಬ್ಯಾಂಕ್‌ ಹಗರಣ: ವಂಚಕರಿಂದ 1 ಸಾವಿರ ಕೋಟಿ ಆಸ್ತಿ ಜಪ್ತಿ?

 ಈ ಬ್ಯಾಂಕ್‌ನಲ್ಲಿ 2009ರಿಂದ 2020ರ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಣಕಾಸು ಅವ್ಯವಹಾರ ಕುರಿತು ಶೋಧಿಸಿರುವ ಸಿಐಡಿ, ಈಗ ವರ್ಷವಾರು ಲೆಕ್ಕಪರಿಶೋಧನೆ ನಡೆಸಿ ಪ್ರತ್ಯೇಕ ಆರೋಪ ಪಟ್ಟಿ ಸಲ್ಲಿಸಲು ನಿರ್ಧರಿಸಿದೆ.  ಅಂತೆಯೇ 2009-10ನೇ ಸಾಲಿನಲ್ಲಿ  60 ರು.  ಕೋಟಿ ಅಕ್ರಮ ನಡೆದಿದೆ ಎಂದು ಬ್ಯಾಂಕ್‌ನ ಮಾಜಿ ಅಧ್ಯಕ್ಷ ರಾಮಕೃಷ್ಣಯ್ಯ ಸೇರಿದಂತೆ 28 ಜನ ಆರೋಪಿಗಳ ವಿರುದ್ಧ ಸಿಐಡಿ ವಿಶೇಷ ನ್ಯಾಯಾಲಯಕ್ಕೆ ಮೊದಲ ಹಂತದ ಆರೋಪ ಪಟ್ಟಿಯನ್ನು ಸಲ್ಲಿಸಿದೆ ಎಂದು ಅಧಿಕಾರಿಗಳು  ತಿಳಿಸಿದ್ದಾರೆ. 

Video Top Stories