ನಾಡಹಬ್ಬ ಮೈಸೂರು ದಸರಾ ಆರಂಭ : ಉದ್ಘಾಟಿಸಿದ ಎಸ್‌.ಎಂ.ಕೃಷ್ಣ

ಇಂದಿನಿಂದ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಮಹೋತ್ಸವ ಆರಂಭಗೊಂಡಿದೆ. ಹಿರಿಯ ರಾಜಕೀಯ ನಾಯಕ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ದಸರಾವನ್ನು ಉದ್ಘಾಟಿಸಿದರು. ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಿದರು. 

9 ದಿನಗಳ ಕಾಲ ನಡೆಯುವ ಉತ್ಸವಕ್ಕೆ ಚಾಲನೆ ದೊರೆತಿದ್ದು ಕೋವಿಡ್ ಹಿನ್ನೆಲೆ ಈ ಬಾರಿ ಸರಳವಾಗಿ ಆಚರಣೆ ಮಾಡಲಾಗುತ್ತದೆ. ಇನ್ನು ದಸರಾ ಕಾರ್ಯಕ್ರಮಗಳಿಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಅಲ್ಲದೇ ಹಲವು ಮಾರ್ಗಸೂಚಿಗಳನ್ನು ವಿಧಿಸಲಾಗಿದೆ. 
 
First Published Oct 7, 2021, 10:51 AM IST | Last Updated Oct 7, 2021, 11:57 AM IST

ಮೈಸೂರು (ಅ.07):  ಇಂದಿನಿಂದ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಮಹೋತ್ಸವ ಆರಂಭಗೊಂಡಿದೆ. ಹಿರಿಯ ರಾಜಕೀಯ ನಾಯಕ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ದಸರಾವನ್ನು ಉದ್ಘಾಟಿಸಿದರು. ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಿದರು. ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ, ಉಸ್ತುವಾರಿ ಸಚಿವರಾದ ಎಸ್‌ ಟಿ ಸೋಮಶೇಖರ್, ಜಿಲ್ಲಾಧಿಕಾರಿ ಬಗಾದಿ ಗೌತಮ್, ಮೇಯರ್  ಸುನಂದಾ ಪಾಲನೇತ್ರ ಇದ್ದರು. 

ಮೈಸೂರು : ಗಮನಿಸಿ! ಹಲವೆಡೆ ವಾಹನ ಸಂಚಾರ -ಪಾರ್ಕಿಂಗ್ ನಿಷೇಧ