ಶಾಲಾ ಕ್ರೀಡಾಕೂಟದಲ್ಲಿ ಆಜಾನ್‌ಗೆ ವಿದ್ಯಾರ್ಥಿಗಳ ನೃತ್ಯ: ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆ

ಉಡುಪಿಯಲ್ಲಿ ಶಾಲಾ ಕ್ರೀಡಾಕೂಟದ ಸಮಯದಲ್ಲಿ ಮುಸ್ಲಿಮರ ಆಜಾನ್’ಗೆ ವಿದ್ಯಾರ್ಥಿಗಳು ನೃತ್ಯ ಮಾಡಿದ್ದು, ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆ ಮಾಡಲಾಗಿದೆ.

First Published Nov 16, 2022, 5:49 PM IST | Last Updated Nov 16, 2022, 5:49 PM IST

ಉಡುಪಿ(ನ 16):ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಶಂಕರ್ ನಾರಾಯಣ್ ಮದರ್ ಥೆರೇಸಾ ಮೆಮೋರಿಯಲ್ ಶಾಲೆಯಲ್ಲಿ ಕ್ರೀಡಾಕೂಟ ಆಯೋಜಿಸಲಾಗಿತ್ತು. ಈ ವೇಳೆ ವಿದ್ಯಾರ್ಥಿನಿಯರ ಸ್ವಾಗತ ನೃತ್ಯದ ವೇಳೆ ಆಜಾನ್’ಗೆ 30 ಸೆಕೆಂಡ್‌’ಗಳ ಕಾಲ ಡ್ಯಾನ್ಸ್ ಮಾಡಲಾಗಿದೆ.‌ ಈ ಎಡವಟ್ಟಿನಿಂದ ಶಾಲಾ ಆಡಳಿತ ಮಂಡಳಿ ವಿರುದ್ಧ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ಕಾರ್ಯಕರ್ತರು ಕ್ಷಮೆಗೆ ಪಟ್ಟು ಹಿಡಿದಿದ್ದರು. ಬಿಜೆಪಿ ಮುಖಂಡ  ಉಮೇಶ್‌ ಶೆಟ್ಟಿ ಕಲ್ಗದೆ ಖಂಡನೆ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿ ಬೆಂಗಳೂರು ಭೇಟಿ ವೇಳೆ ಭದ್ರತಾ ವೈಫಲ್ಯ?