ಭಾನುವಾರದ ಕರ್ಫ್ಯೂಗೆ ಮಂಗಳೂರಿನಲ್ಲಿ ಸಂಪೂರ್ಣ ಬೆಂಬಲ

ಮಂಗಳೂರಿನ ಅತಿದೊಡ್ಡ ಮಾರುಕಟ್ಟೆ ಎನಿಸಿಕೊಂಡಿರುವ ಮಲ್ಲಿಕಟ್ಟೆ ಮಾರುಕಟ್ಟೆ ಸಂಪೂರ್ಣ ಬಂದ್ ಆಗಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾಡಳಿತ ಅಗತ್ಯ ವಸ್ತುಗಳಾದ ತರಕಾರಿ, ಮೀನು ಹಾಗೂ ಮಾಂಸ ಮಾರಾಟಕ್ಕೆ ಅವಕಾಶ ಮಾಡಿಕೊಟ್ಟಿದ್ದರೂ ಸಹಾ ಮಾರುಕಟ್ಟೆ ವ್ಯಾಪಾರಿಗಳು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿದ್ದಾರೆ. 

First Published May 24, 2020, 1:00 PM IST | Last Updated May 24, 2020, 1:02 PM IST

ಮಂಗಳೂರು(ಮೇ.24): ಮುಸ್ಲಿಂ ಸಮುದಾಯದವರು ರಂಜಾನ್ ಹಬ್ಬವನ್ನು ಭಾನುವಾರವಾದ ಇಂದೇ ಆಚರಿಸುತ್ತಿದ್ದಾರೆ. ಮೇಲ್ನೋಟಕ್ಕೆ ಮಂಗಳೂರಿನಲ್ಲಿ ಜನತಾ ಕರ್ಫ್ಯೂ ಹೇರಿದಂತೆ ಭಾಸವಾಗುತ್ತಿದೆ. 

ಮಂಗಳೂರಿನ ಅತಿದೊಡ್ಡ ಮಾರುಕಟ್ಟೆ ಎನಿಸಿಕೊಂಡಿರುವ ಮಲ್ಲಿಕಟ್ಟೆ ಮಾರುಕಟ್ಟೆ ಸಂಪೂರ್ಣ ಬಂದ್ ಆಗಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾಡಳಿತ ಅಗತ್ಯ ವಸ್ತುಗಳಾದ ತರಕಾರಿ, ಮೀನು ಹಾಗೂ ಮಾಂಸ ಮಾರಾಟಕ್ಕೆ ಅವಕಾಶ ಮಾಡಿಕೊಟ್ಟಿದ್ದರೂ ಸಹಾ ಮಾರುಕಟ್ಟೆ ವ್ಯಾಪಾರಿಗಳು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿದ್ದಾರೆ. 

ಹೀಗಿದೆ ನೋಡಿ ಶಿವಮೊಗ್ಗದಲ್ಲಿ ಸಂಡೇ ಲಾಕ್‌ಡೌನ್..!

ಖಾಸಗಿ ಹಾಗೂ ಸರ್ಕಾರಿ ಬಸ್ ಸೇರಿದಂತೆ ಸಂಪೂರ್ಣ ವಾಹನ ಸಂಚಾರ ಮಂಗಳೂರಿನಾದ್ಯಂತ ಬಂದ್ ಆಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.