Asianet Suvarna News Asianet Suvarna News

ಮಂಗಳೂರು ವಿಮಾನ ನಿಲ್ದಾಣದ ಸುತ್ತ ಹೈ ಅಲರ್ಟ್.. ಜನರೇನು ಮಾಡಬೇಕು?

Sep 22, 2021, 8:37 PM IST

ಮಂಗಳೂರು(ಸೆ. 22) ಕರಾವಳಿಯಲ್ಲಿ ಉಗ್ರರ ದಾಳಿ ಸಾಧ್ಯತೆ ಕಾರಣ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸುತ್ತಮುತ್ತಲೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಏರ್ ಪೋರ್ಟ್ ಸುತ್ತಮುತ್ತಲಿನ ಜನರನ್ನೂ ಏರ್ ಪೋರ್ಟ್ ಆಡಳಿತ ಮಂಡಳಿ ಎಚ್ಚರಿಸಿದೆ.

ಹೈ ಅಲರ್ಟ್ ನೀಡಿದ ಗುಪ್ತಚರ ದಳ

ಮಂಗಳೂರು (Mangaluru) ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Airport) ಸುತ್ತಮುತ್ತಲೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.ಏರ್ ಪೋರ್ಟ್ ಭದ್ರತೆಯ ಸಿಐಎಸ್ಎಫ್ (CISF) ಹಾಗೂ ಬಜ್ಪೆ ಪೊಲೀಸರಿಂದ ಸ್ಥಳೀಯರಿಗೆ ಜಾಗೃತಿ ಮೂಡಿಸಲಾಗಿದೆ.  ಅನುಮಾನಾಸ್ಪದ ವ್ಯಕ್ತಿ ಅಥವಾ ವಸ್ತು, ಡ್ರೋನ್ ಬಳಕೆ ಕಂಡು ಬಂದಲ್ಲಿ ಮಾಹಿತಿ ನೀಡಲು ಸೂಚನೆ ನೀಡಲಾಗಿದೆ.