Kolar: ಐಟಿ ಉದ್ಯೋಗಕ್ಕೆ ಗುಡ್‌ಬೈ, ಸಾವಯವ ಕೃಷಿಯಲ್ಲಿ ಯಶಸ್ಸು ಕಂಡ ಸಹೋದರರು!

ಇತ್ತೀಚಿನ ದಿನಗಳಲ್ಲಿ ಯುವ ಜನತೆ ಕೃಷಿಯತ್ತ ಬರುತ್ತಿರುವುದು ಹೆಚ್ಚಾಗುತ್ತಿದೆ. ಕೈತುಂಬಾ ಸಂಬಳ ಬರುವ ಕೆಲಸವನ್ನು ಬಿಟ್ಟು, ತಮ್ಮ ಊರಿಗೆ ಬಂದು ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದು ಹೆಚ್ಚಾಗಿದೆ.

First Published Feb 20, 2022, 5:00 PM IST | Last Updated Feb 20, 2022, 5:00 PM IST

ಕೋಲಾರ (ಫೆ. 20): ಇತ್ತೀಚಿನ ದಿನಗಳಲ್ಲಿ ಯುವ ಜನತೆ ಕೃಷಿಯತ್ತ ಬರುತ್ತಿರುವುದು ಹೆಚ್ಚಾಗುತ್ತಿದೆ. ಕೈತುಂಬಾ ಸಂಬಳ ಬರುವ ಕೆಲಸವನ್ನು ಬಿಟ್ಟು, ತಮ್ಮ ಊರಿಗೆ ಬಂದು ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದು ಹೆಚ್ಚಾಗಿದೆ.

ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾ. ಹರಳಕುಂಟೆ ಗ್ರಾಮದ ಸಹೋದರರಿಬ್ಬರೂ ಕೈತುಂಬಾ ಸಂಬಳ ಬರುವ ಉದ್ಯೋಗದಲ್ಲಿದ್ದರು. ಆದರೆ ಕೃಷಿಯಲ್ಲಿ ಏನಾದರೂ ಸಾಧನೆ ಮಾಡಬೇಕೆಂದು ಕೆಲಸವನ್ನು ಬಿಟ್ಟು ತಮ್ಮ ಊರಿಗೆ ವಾಪಸ್ಸಾಗುತ್ತಾರೆ. ಪಿತ್ರಾರ್ಜಿತವಾಗಿ ಬಂದ 7 ಎಕರೆ ಭೂಮಿಯಲ್ಲಿ ಕೃಷಿ ಮಾಡಲು ಆರಂಭಿಸಿದರು. ಸಾವಯವ ಕೃಷಿ ಮಾಡಿ, ಬಾಳೆ ಬೆಳೆದಿದ್ದಾರೆ. ಇದರಲ್ಲಿ ಒಳ್ಳೆಯ ಆದಾಯ ಪಡೆಯುತ್ತಿದ್ದು, ಯುವಕರಿಗೆ ಮಾದರಿಯಾಗಿದ್ದಾರೆ.