ಕಳೆದ 6 ವರ್ಷದಲ್ಲಿ 72 ಲಕ್ಷ ರೂಪಾಯಿ ದಾನ ಮಾಡಿರುವ ಸಹೃದಯಿ ರವಿ ಕಟಪಾಡಿ
ಮೇಸ್ತ್ರಿ ಕೆಲಸ ಮಾಡುವ ರವಿ ಕಟಪಾಡಿ ಪ್ರತಿವರ್ಷ ಶ್ರೀಕೃಷ್ಣ ಜನ್ಮಾಷ್ಟಮಿಗೆ ವೇಷಧರಿಸಿ ಅನಾರೋಗ್ಯ ಪೀಡಿತ ಮಕ್ಕಳಿಗೆ ಸಹಾಯ ಮಾಡುತ್ತಾರೆ. ಕಳೆದ ಆರು ವರ್ಷದಲ್ಲಿ ಬರೋಬ್ಬರಿ 72 ಲಕ್ಷ ರೂಪಾಯಿಯನ್ನು ಸುಮಾರು 33 ಮಕ್ಕಳಿಗೆ ನೀಡಿದ್ದಾರೆ.
ಉಡುಪಿ (ಸೆ. 03): ಸಾಂಕ್ರಾಮಿಕ ಕೊರೋನಾ ನಡುವೆಯೇ ಶ್ರೀಕೃಷ್ಣ ಜನ್ಮಾಷ್ಟಮಿ ಮುಗಿದಿದೆ. ಅದ್ದೂರಿ ಅಷ್ಟಮಿ ಆಚರಣೆಗೆ ಉಡುಪಿ ಜಿಲ್ಲಾಡಳಿತ ಅವಕಾಶ ಕೊಟ್ಟಿಲ್ಲ. ಅಷ್ಟಮಿ ದಿನ ಸಾವಿರಾರು ಜನ ವೇಷ ಧರಿಸುತ್ತಾರೆ ಆದರೆ ಈ ಬಾರಿಯೂ ಅದಕ್ಕೆ ಚಾನ್ಸ್ ಇರಲಿಲ್ಲ. ಬಿಗ್ ತ್ರೀ ಹೀರೋ -ಸಮಾಜಸೇವಕ ಉಡುಪಿಯ ರವಿ ಕಟಪಾಡಿಗೆ ಸ್ಪೆಷಲ್ ಅವಕಾಶ ಕೊಡಲಾಗಿತ್ತು. ಹಾಲಿವುಡ್ ಸಿನಿಮಾದ ಫ್ಯಾಂಟಸಿ ವೇಷ ಡಾರ್ಕ್ ಅಲೈಟ್ ಮೂಲಕ ಎರಡು ದಿನ ರವಿ ಓಡಾಡಿ ಅಷ್ಟಮಿಗೆ ಹೊಸಕಳೆ ತಂದಿದ್ದಾರೆ.
ಮೇಸ್ತ್ರಿ ಕೆಲಸ ಮಾಡುವ ರವಿ ಕಟಪಾಡಿ ಪ್ರತಿವರ್ಷ ಶ್ರೀಕೃಷ್ಣ ಜನ್ಮಾಷ್ಟಮಿಗೆ ವೇಷಧರಿಸಿ ಅನಾರೋಗ್ಯ ಪೀಡಿತ ಮಕ್ಕಳಿಗೆ ಸಹಾಯ ಮಾಡುತ್ತಾರೆ. ಕಳೆದ ಆರು ವರ್ಷದಲ್ಲಿ ಬರೋಬ್ಬರಿ 72 ಲಕ್ಷ ರೂಪಾಯಿಯನ್ನು ಸುಮಾರು 33 ಮಕ್ಕಳಿಗೆ ನೀಡಿದ್ದಾರೆ. ಸೋನಿ ಟಿವಿಯ ಕೌನ್ ಬನೇಗಾ ಕರೋಡ್ ಪತಿಯಲ್ಲಿ ಬಂದ ಎಂಟು ಲಕ್ಷ ರೂಪಾಯಿಯನ್ನು ಪೂರ್ತಿಯಾಗಿ ಕಷ್ಟದಲ್ಲಿರುವವರಿಗೆ ಕೊಟ್ಟಿದ್ದಾರೆ. ಅಂತರರಾಷ್ಟ್ರೀಯ ಮಟ್ಟದ ವೆಬ್ಸೈಟ್ಗಳಲ್ಲಿ ಬಂದ ಹಣದಲ್ಲಿ ಒಂದು ರೂಪಾಯಿಯನ್ನು ರವಿ ಇಟ್ಟುಕೊಂಡಿಲ್ಲ.