ಖಾಸಗಿ ಆಸ್ಪತ್ರೆ ಮೀರಿಸುವ ಭಟ್ಕಳ ತಾಲೂಕಿನ ಸರ್ಕಾರಿ ಆಸ್ಪತ್ರೆ..!
ಭಟ್ಕಳ (Bhatkal) ಸರ್ಕಾರಿ ಆಸ್ಪತ್ರೆ ಮಾತ್ರ ಖಾಸಗಿ ಆಸ್ಪತ್ರೆಗಳನ್ನು ಕೂಡಾ ಮೀರಿಸುವಂತಿದ್ದು, ಜನಸಾಮಾನ್ಯರಿಗೂ ಅತ್ಯುತ್ತಮ ಸ್ಪಂದನೆ ನೀಡುತ್ತಿದೆ.
ಸರ್ಕಾರಿ ಆಸ್ಪತ್ರೆಗಳನ್ನು ಕಂಡ್ರೆ ಮೂಗು ಮುರಿಯುವರೇ ಜಾಸ್ತಿ. ಆಸ್ಪತ್ರೆಯ ಕಟ್ಟಡಗಳ ದುಸ್ಥಿತಿ, ಸರಿಯಾಗಿ ಸ್ಪಂದಿಸದ ಡಾಕ್ಟರ್ಸ್ ಹಾಗೂ ಸಿಬ್ಬಂದಿ, ಔಷಧಿಗಳಿಲ್ಲದ ಮಳಿಗೆ ಹೀಗೆ ಹತ್ತು ಹಲವು ರೀತಿಯ ಸಮಸ್ಯೆಗಳಿಂದ ಜನರು ಅತ್ತ ಕಾಲಿಡೋದೇ ಕಡಿಮೆ. ಆದರೆ, ಇಂತಹ ಆಸ್ಪತ್ರೆಗಳ ಮಧ್ಯೆ ಇಲ್ಲೊಂದು ಸರ್ಕಾರಿ ಆಸ್ಪತ್ರೆ ಮಾತ್ರ ಖಾಸಗಿ ಆಸ್ಪತ್ರೆಗಳನ್ನು ಕೂಡಾ ಮೀರಿಸುವಂತಿದ್ದು, ಜನಸಾಮಾನ್ಯರಿಗೂ ಅತ್ಯುತ್ತಮ ಸ್ಪಂದನೆ ನೀಡುತ್ತಿದೆ.
ಕಾರವಾರ: ಹಾಳು ಕೊಂಪೆಯಂತಾದ ಹೊನ್ನಾವರದ ಸಬ್ ರಿಜಿಸ್ಟ್ರಾರ್ ಕಚೇರಿ
ಉತ್ತರಕನ್ನಡ (Uttara Kannada) ಜಿಲ್ಲೆಯ ಭಟ್ಕಳ (Bhatkal) ತಾಲೂಕಿನ ಸರ್ಕಾರಿ ಆಸ್ಪತ್ರೆಯ ದೃಶ್ಯ. ಈ ಆಸ್ಪತ್ರೆಯಲ್ಲಿ ಇಷ್ಟೊಂದು ಪ್ರಮಾಣದ ಅಭಿವೃದ್ಧಿ ನಡೆದಿರೋದು ಸರ್ಕಾರದ ಅನುದಾನಗಳಿಂದಲ್ಲ. ಬದಲಾಗಿ ಭಾರೀ ಪ್ರಮಾಣದಲ್ಲಿ ಇನ್ಫೋಸಿಸ್ ಫೌಂಡೇಶನ್ ಹಾಗೂ ಸ್ಥಳೀಯ ದಾನಿಗಳ ಸಹಕಾರದಿಂದ. ಈ ಆಸ್ಪತ್ರೆಯಲ್ಲಿ ಏರ್ ಕಂಡೀಷನ್ ಹಾಲ್, ಡಯಾಲಿಸಿಸ್ ಸೆಂಟರ್, 100 ಬೆಡ್ ವ್ಯವಸ್ಥೆ, ಸೂಪರ್ ಸ್ಪೆಷಲ್ ಹಾಗೂ ಡಿಲಕ್ಸ್ ರೂಮ್ಸ್ , ಹವಾ ನಿಯಂತ್ರಿತ ಶವಗಾರ, ಉತ್ತಮ ಗಾರ್ಡನ್ ಸೇರಿದಂತೆ ಹತ್ತು ಹಲವು ಸೌಲಭ್ಯಗಳನ್ನು ಹೊಂದಿದೆ. ಎಲ್ಲವೂ ದಾನಿಗಳ ಸಹಾಯದಿಂದ ಆಗಿರೋದು ಹೊರತು ಇದ್ಯಾವುದಕ್ಕೂ ಸರ್ಕಾರದ ಯಾವುದೇ ಅನುದಾನ ಬಳಕೆಯಾಗಿಲ್ಲ.
ಕಾರವಾರ: ಸಿಆರ್‌ಝಡ್ ನಿಯಮ ಉಲ್ಲಂಘಿಸಿ ಪಾರ್ಕ್ ನಿರ್ಮಾಣ, ಮೀನುಗಾರರಿಗೆ ಸಂಕಷ್ಟ
ಈ ಆಸ್ಪತ್ರೆಗೆ 20ಲಕ್ಷ ರೂ. ವೆಚ್ಚದಲ್ಲಿ ಇನ್ಪೊಸಿಸ್ ಫೌಂಡೇಷನ್ ರೂಫ್ ವ್ಯವಸ್ಥೆ ಮಾಡಿಸಿಕೊಟ್ಟಿದೆ. ದಾನಿಯೋರ್ವರಿಂದ ಸುಮಾರು 45ಲಕ್ಷ ರೂ. ವೆಚ್ಚದಲ್ಲಿ ಡಯಾಲಿಸಿಸ್ ಸೆಂಟರ್ ನಿರ್ಮಾಣವಾಗಿದೆ. ಇನ್ನೋರ್ವ ದಾನಿಯಿಂದ ಆಸ್ಪತ್ರೆಗೆ ಸಂಪೂರ್ಣವಾಗಿ ಪೈಂಟಿಂಗ್ ವ್ಯವಸ್ಥೆ. ಹೀಗೆ ಹತ್ತು ಹಲವು ಸೌಲಭ್ಯಗಳು ದಾನಿಗಳಿಂದಲೇ ಈ ಆಸ್ಪತ್ರೆಗೆ ದೊರಕಿದೆ. ದಾನಿಗಳೇ ಖುದ್ದಾಗಿ ಆಸ್ಪತ್ರೆಯನ್ನು ಸಂಪರ್ಕಿಸಿ ತಾಲೂಕು ವೈದ್ಯಾಧಿಕಾರಿಗಳು ನೀಡಿದ ಮಾಹಿತಿಯಂತೆ ಬಡವರಿಗೆ ಅನುಕೂಲವಾಗುವ ರೀತಿಯಲ್ಲಿ ಆಸ್ಪತ್ರೆಯನ್ನು ತಯಾರು ಮಾಡಿಕೊಟ್ಟಿದ್ದಾರೆ.