ಡೆಪ್ಯೂಟಿ ಸ್ಪೀಕರ್ ಆನಂದ್ ಮಾಮನಿ ನಿಧನ: ಸಂಜೆ ಅಂತ್ಯಸಂಸ್ಕಾರ

ವಿಧಾನಸಭೆಯ ಉಪ ಸಭಾಪತಿ ಆನಂದ ಮಾಮನಿ ನಿಧನರಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸವದತ್ತಿಯ ಅವರ ನಿವಾಸದಲ್ಲಿ ಮೌನ ಮಡುಗಟ್ಟಿದೆ.

First Published Oct 23, 2022, 10:45 AM IST | Last Updated Oct 23, 2022, 10:45 AM IST

ಸವದತ್ತಿ ಕ್ಷೇತ್ರದ ಶಾಸಕರಾಗಿದ್ದ ಮಾಮನಿ, ಲಿವರ್ ಕ್ಯಾನ್ಸರ್, ಜಾಂಡೀಸ್‍ನಿಂದ ಬಳಲುತ್ತಿದ್ದರು. ಚೆನ್ನೈನಲ್ಲಿ ಚಿಕಿತ್ಸೆ ಪಡೆದು ಬೆಂಗಳೂರಿಗೆ ಶಿಫ್ಟ್ ಆಗಿದ್ದರು. ಇಂದು ಸಂಜೆ ಸ್ವಕ್ಷೇತ್ರದಲ್ಲಿ ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಯಲಿದೆ. ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಮಾಮನಿ, ವಿಧಾನಸಭೆಯ ಡೆಪ್ಯೂಟಿ ಸ್ಪೀಕರ್ ಆಗಿದ್ದರು. 2018ರಲ್ಲಿ ಮೂರನೇ ಬಾರಿ ಶಾಸಕರಾಗಿ ಹ್ಯಾಟ್ರಿಕ್  ಗೆಲುವು ಸಾಧಿಸಿದ್ದರು.

Davanagere News: ನಗರಸಭೆಯಲ್ಲಿ ಅಕ್ರಮ; ಲೋಕಾಗೆ ದೂರು ನೀಡಲು ನಿರ್ಧಾರ

Video Top Stories