Crime News: ಬೆಂಗಳೂರಿನಲ್ಲಿ ಖಾಸಗಿ ಬಸ್‌ ಡಿಕ್ಕಿಯಾಗಿ ಮಹಿಳೆ ಸಾವು

ಬೆಂಗಳೂರಿನಲ್ಲಿ ಖಾಸಗಿ ಬಸ್‌ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

Share this Video
  • FB
  • Linkdin
  • Whatsapp

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಖಾಸಗಿ ಬಸ್‌ಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಕೆಲಸಕ್ಕೆ ಹೋಗುತ್ತಿದ್ದ ಮಹಿಳೆಗೆ ಖಾಸಗಿ ಬಸ್‌ ಡಿಕ್ಕಿಯಾಗಿ ಸ್ಥಳದಲ್ಲೇ ವಿನುತಾ ಎಂಬುವವರು ಸಾವನ್ನಪ್ಪಿದ್ದಾರೆ. ಯಶವಂತಪುರದ ಶೆಲ್‌ ಪೆಟ್ರೋಲ್‌ ಬಂಕ್‌ ಬಳಿ ಘಟನೆ ನಡೆದಿದ್ದು, ಗಾಡಿ ಸೈಡಿಗೆ ಹಾಕಿ ಫೋನ್‌ನಲ್ಲಿ ಮಾತನಾಡುತ್ತಿದ್ದ ವಿನುತಾ ರಸ್ತೆ ಬದಿ ಗಾಡಿ ನಿಲ್ಲಿಸಿದ್ದಾರೆ. ಈ ವೇಳೆ ಬಸ್‌ ಬಂದು ಗುದ್ದಿದೆ. ಖಾಸಗಿ ಕಂಪನಿಯಲ್ಲಿ ವಿನುತಾ ಅಕೌಂಟೆಂಟ್‌ ಆಗಿದ್ದರು. ಇನ್ನು ಶವದ ಮುಂದೆ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

Related Video