ಬೆಳಗಾವಿಯಲ್ಲಿ ಮಿತಿಮೀರಿದ ಗಾಂಜಾ ಹಾವಳಿ, ಸಿಡಿದೆದ್ದ ಮಹಿಳೆಯರು
ಬೆಳಗಾವಿಯಲ್ಲಿ ದಿನದಿಂದ ದಿನಕ್ಕೆ ಗಾಂಜಾ ಹಾವಳಿ ಮಿತಿ ಮೀರುತ್ತಿದೆ. ಇದನ್ನು ತಡೆಯುವಂತೆ ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ.
ಬೆಳಗಾವಿ, (ಫೆ.20): ಬೆಳಗಾವಿಯಲ್ಲಿ ದಿನದಿಂದ ದಿನಕ್ಕೆ ಗಾಂಜಾ ಹಾವಳಿ ಮಿತಿ ಮೀರುತ್ತಿದೆ. ಇದನ್ನು ತಡೆಯುವಂತೆ ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ.
ಬೆಳಗಾವಿಯ ನ್ಯೂ ಗಾಂಧಿನಗರ, ಉಜ್ವಲ ನಗರದ ಮಹಿಳೆಯರು ನಗರ ಪೊಲೀಸ್ ಆಯುಕ್ತರ ಕಚೇರಿವರೆಗೆ ಪ್ರತಿಭಟನೆ ಮಾಡಿದ್ದು, ಗಾಂಜಾ ಹಾವಳಿಯನ್ನು ತಡೆಗಟ್ಟುವಂತೆ ಆಗ್ರಹಿಸಿದ್ದಾರೆ.
ಗಾಂಜಾ ಮತ್ತಿನಲ್ಲಿ ಮಹಿಳೆಯರನ್ನು ಚುಡಾಯಿಸುತ್ತಿರುವ ಪ್ರಕರಣಗಳು ನಡೆದಿವೆ. ಅಮಲಿನ ಆಸೆಯಿಂದ ವಿದ್ಯಾರ್ಥಿಗಳು ಬಲಿಯಾಗುತ್ತಿದ್ದಾರೆಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು. ಎರಡು ದಿನಗಳ ಹಿಂದೆ ಮಹ್ಮದ್ ಕಫ್ ಮೇಲೆ ಗಾಂಜಾ ಮತ್ತಿನಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು.