ಉತ್ತರ ಕರ್ನಾಟಕ ಸಮಗ್ರ ಅಭಿವೃದ್ಧಿಯಾಗಬೇಕು: ಯಾಸಿನ್ ಜವಳಿ
ಬಸವನಬಾಗೇವಾಡಿಯಿಂದ ಬೆಂಗಳೂರಿಗೆ ಪಾದಯಾತ್ರೆ| ಉತ್ತರ ಕರ್ನಾಟಕ ರೈತ ಅಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಯಾಸಿನ್ ಜವಳಿ ನೇತೃತ್ವದಲ್ಲಿ ಪಾದಯಾತ್ರೆ| ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಯಾಗಬೇಕು, ಈ ಭಾಗದ ಯುವಕರಿಗೆ ಉದ್ಯೋಗ ಸಿಗಬೇಕು|
ಬಾಗಲಕೋಟೆ(ಜ.23): ಉತ್ತರ ಕರ್ನಾಟಕದ ಅಭಿವೃದ್ಧಿಗೆ ಅಗ್ರಹಿಸಿ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯಿಂದ ಬೆಂಗಳೂರಿಗೆ ಉತ್ತರ ಕರ್ನಾಟಕ ರೈತ ಅಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಯಾಸಿನ್ ಜವಳಿ ನೇತೃತ್ವದಲ್ಲಿ ಪಾದಯಾತ್ರೆಯನ್ನ ಕೈಗೊಳ್ಳಲಾಗಿದೆ. ಪಾದಯಾತ್ರೆ ಇಂದು ಜಿಲ್ಲೆಯ ಗದ್ದನಕೇರಿ ಗ್ರಾಮಕ್ಕೆ ಆಗಮಿಸಿದೆ.
ಸ್ಫೋಟದ ಮೂಲ ಶಿವಮೊಗ್ಗ ಅಲ್ಲ! ಬೆನ್ನತ್ತಿದಾಗ ಸಿಕ್ಕ ಬೆಚ್ಚಿಬೀಳಿಸುವ ರಹಸ್ಯ
ಈ ವೇಳೆ ಏಷ್ಯಾನೆಟ್ ಸುವರ್ಣ ನ್ಯೂಸ್ ಜತೆ ಮಾತನಾಡಿದ ಯಾಸಿನ್ ಜವಳಿ, ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಯಾಗಬೇಕು, ಈ ಭಾಗದ ಯುವಕರಿಗೆ ಉದ್ಯೋಗ ಸಿಗಬೇಕು, ಇಲ್ಲಿ ಐಟಿ, ಬಿಟಿ ಕಂಪನಿಗಳು ಆಗಬೇಕು ಸೇರಿದಂತೆ ವಿವಿಧ ಬೇಡಿಕೆಗೆಳಿಗೆ ಆಗ್ರಹಿಸಿ ಪಾದಯಾತ್ರೆಯನ್ನ ಕೈಗೊಂಡಿದ್ದಾರೆ.