ದಳಪತಿಗಳ ಕೋಟೆಯಲ್ಲಿ ಮೋದಿ ರೋಡ್ ಶೋ... ಪ್ರಧಾನಿ ಕೊಂಡಾಡಿದ ಸಿಎಂ
ಮಂಡ್ಯ ಅಂದ್ರೆ ಇಂಡಿಯಾ ಎಂದು ಗೆಜ್ಜಲಗೆರೆಯ ಬೃಹತ್ ಸಮಾವೇಶದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮೈಸೂರು- ಬೆಂಗಳೂರು ದಶಪಥ ಹೆದ್ದಾರಿ ಉದ್ಘಾಟನೆ ಬಳಿಕ ಗೆಜ್ಜಲಗೆರೆಯ ಬೃಹತ್ ಸಮಾವೇಶದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದು, ಮಂಡ್ಯ ಅಂದ್ರೆ ಇಂಡಿಯಾ, ವಿರೋಧಿ ರಾಷ್ಟ್ರಗಳಲ್ಲಿನ ಜನ ಕೂಡ ಮೋದಿಯನ್ನು ಒಪ್ಪಿಕೊಂಡಿದ್ದಾರೆ ಅದಕ್ಕೆ ಮೋದಿಯವರನ್ನು ವಿಶ್ವನಾಯಕ ಎಂದು ಕರೆಯಲಾಗಿದೆ ಎಂದು ತಿಳೀಸಿದರು . 2014ರಲ್ಲಿ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಗೆ ಶಂಕುಸ್ಥಾಪನೆ ಹಾಕಿದ್ದು ಪ್ರಧಾನಿ ಮೋದಿಯವರು, ನಂತರ ಅದರ ಕಾಮಗಾರಿಯೂ ಅವರ ನೇತೃತ್ವದಲ್ಲಿ ಸಾಗಿತು. ಇದೀಗ ಉದ್ಘಾಟನೆಯಾಗುತ್ತಿದೆ ಎಂದು ಬೊಮ್ಮಾಯಿ ಹೇಳಿದರು.ಕಿಸಾನ್ ಸಮ್ಮಾನ್ ಯೋಜನೆಯಿಂದ ಮಂಡ್ಯದ 2 ಲಕ್ಷಕ್ಕೂ ಹೆಚ್ಚು ಜನ ಯೋಜನೆ ಲಾಭ ಪಡೆದಿದ್ದಾರೆ.ಮುಂದಿನ ದಿನಗಳಲ್ಲಿ ಬಿಜೆಪಿ ಬೆಂಬಲಿಸುವ ಮೂಲಕ ಆಶೀರ್ವದಿಸಿ ಎಂದರು.