ಕಾಂಗ್ರೆಸ್‌ ಗ್ಯಾರಂಟಿಗೆ ಚಿತ್ರದುರ್ಗ ಜನತೆ ಟಕ್ಕರ್‌ : ವಿದ್ಯುತ್‌ ಬಿಲ್‌ ಕಟ್ಟಲ್ಲ ಎಂದು ಪಟ್ಟು- ವಿಡಿಯೋ ವೈರಲ್‌

ಚಿತ್ರದುರ್ಗದಲ್ಲಿ ಜನ ವಿದ್ಯುತ್‌ ಬಿಲ್‌ ಕಟ್ಟುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಸದ್ಯ ಈ ವಿಡಿಯೋ ಎಲ್ಲೆಡೆ ವೈರಲ್‌ ಆಗುತ್ತಿದೆ. 

First Published May 15, 2023, 4:03 PM IST | Last Updated May 15, 2023, 4:03 PM IST

ಚಿತ್ರದುರ್ಗ: ಕಾಂಗ್ರೆಸ್‌ ಗ್ಯಾರಂಟಿಗೆ ಚಿತ್ರದುರ್ಗ ಜನತೆ ಟಕ್ಕರ್‌ ಕೊಟ್ಟಿದ್ದಾರೆ. ನಾವು ವಿದ್ಯುತ್ ಬಿಲ್‌ ಕಟ್ಟುವುದಿಲ್ಲ ಎಂದು ಬೆಸ್ಕಾಂ ಮೀಟರ್‌ ರೀಡರ್‌ಗೆ ಆವಾಜ್‌ ಹಾಕಿದ್ದಾರೆ. ಈ ಘಟನೆ ಚಿತ್ರದುರ್ಗ ತಾಲೂಕಿನ ಜಾಲಿಕಟ್ಟೆ ಗ್ರಾಮದಲ್ಲಿ ನಡೆದಿದೆ.ಸದ್ಯ ಗ್ರಾಮಸ್ಥರು ವಿದ್ಯುತ್ ಬಿಲ್ ಕಟ್ಟಲ್ಲ ಎಂದಿರುವ ವಿಡಿಯೋ ವೈರಲ್ ಆಗುತ್ತಿದೆ. ವಿದ್ಯುತ್ ಫ್ರೀ ಎಂದು ಮೊದಲೇ ಕಾಂಗ್ರೆಸ್ ಘೋಷಿಸಿದೆ. ಈಗ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆಯಲ್ಲ. ಹಾಗಾಗಿ ನಾವು ಬಿಲ್‌ ಕಟ್ಟಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಆದೇಶ ಬರುವವರೆಗೆ ಬಿಲ್ ಕಟ್ಟಬೇಕೆಂದು ಮೀಟರ್ ರೀಡರ್ ಹೇಳಿದ್ರು, ಜನ ಅವರ ಮಾತು ಕೇಳುವ ಸ್ಥಿತಿಯಲ್ಲಿರಲಿಲ್ಲ.

ಇದನ್ನೂ ವೀಕ್ಷಿಸಿ: ಪ್ರಮೋದ್ ಮುತಾಲಿಕ್ ಒಬ್ಬ ಡೀಲ್ ಮಾಸ್ಟರ್ : ಸುನಿಲ್‌ ಕುಮಾರ್‌ ಆರೋಪ

Video Top Stories