ಶಾಸಕರ ಮಗನಿಂದ ಮುಖ್ಯೋಪಾಧ್ಯಾಯರಿಗೆ ಜೀವ ಬೆದರಿಕೆ ಆರೋಪ: ಆಡಿಯೋ ಕ್ಲಿಪ್‌ ವೈರಲ್‌

ಕಾಂಗ್ರೆಸ್‌ ಶಾಸಕರೊಬ್ಬರ ಮಗನ ಮೇಲೆ ಶಿಕ್ಷಕರೊಬ್ಬರಿಗೆ ಜೀವಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ.
 

Share this Video
  • FB
  • Linkdin
  • Whatsapp

ಕಲಬುರಗಿ: ಅಫಜಲಪುರ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ವೈ. ಪಾಟೀಲ್‌ ಮಗನ ಮೇಲೆ ಬೆದರಿಕೆ ಆರೋಪ ಕೇಳಿಬಂದಿದೆ.ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಅರುಣ್‌ಕುಮಾರ್‌ ಪಾಟೀಲ್‌ ಬೆದರಿಕೆ ಹಾಕಿದ್ದಾರೆ ಎನ್ನಲಾಗ್ತಿದೆ.ಅಫಜಲಪುರ ತಾಲೂಕಿನ ಮಾಶ್ಯಾಳ್ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯ ಶಿವಕುಮಾರ್ ಬಿರಾದರ್‌ ಎಂಬುವವರಿಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗ್ತಿದ್ದು, ಈ ಸಂಬಂಧ ದೂರು ದಾಖಲಿಸಿದ್ದಾರೆ.ಅರುಣ್ ಕುಮಾರ್ ಪಾಟೀಲ್ ಬೆದರಿಕೆ ಹಾಕಿದ್ದಾರೆ ಎನ್ನಲಾದ ಆಡಿಯೋ ಕ್ಲಿಪ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲೆಗೆ ಅತಿಥಿ ಶಿಕ್ಷಕರ ನೇಮಕಾತಿ ರದ್ದು ಮಾಡುವಂತೆ ಧಮ್ಕಿ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ವೀಕ್ಷಿಸಿ: ಸಕ್ಕರೆ ನಾಡಿನಲ್ಲಿ ಅಕ್ಕರೆಯ ಅಭಿ-ಅವಿವಾ ಬೀಗರೂಟ: ಇಂದು ಅಂಬಿ ಫ್ಯಾನ್ಸ್‌ಗೆ ಭರ್ಜರಿ ಬಾಡೂಟ!

Related Video