Asianet Suvarna News Asianet Suvarna News

ರಸ್ತೆಯಲ್ಲಿ ಮನಬಂದಂತೆ ಪುಂಡರ ವ್ಹೀಲಿಂಗ್: ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್

ಪುಂಡರ ವ್ಹೀಲಿಂಗ್ ವಿಡಿಯೋ ಮೊಬೈಲ್‌ನಲ್ಲಿ ಸೆರೆ
ನಂಬರ್ ಪ್ಲೇಟ್ ತೆಗೆದು ಹಾಕಿ ಪುಂಡರಿಂದ ವ್ಹೀಲಿಂಗ್
ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್
 

ಚಾಮರಾಜನಗರ: ಚಾಮರಾಜನಗರ ತಾಲೂಕಿನ ಮಹಂತಾಳ್ ಪುರ ಸಮೀಪ ಪುಂಡರು ಮನಬಂದಂತೆ ರಸ್ತೆಯಲ್ಲಿ ವ್ಹೀಲಿಂಗ್‌ ಮಾಡಿದ್ದಾರೆ. ಅವರು ವ್ಹೀಲಿಂಗ್ ಮಾಡುವ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯಲಾಗಿದೆ. ಅಲ್ಲದೇ ಬೈಕ್‌ನ ನಂಬರ್‌ ಪ್ಲೇಟ್‌ ತೆಗೆದುಹಾಕಿ, ವ್ಹೀಲಿಂಗ್‌ ಮಾಡಿದ್ದಾರೆ. ಈ ಹಿಂದೆ ಎಸ್‌ಪಿ ಕಚೇರಿ ರಸ್ತೆಯ ಮುಂದೆ ಪುಂಡರು ವ್ಹೀಲಿಂಗ್‌ ಮಾಡಿದ್ದರು. ಈ ವೇಳೆ ಎಚ್ಚೆತ್ತುಕೊಂಡ ಪೊಲೀಸ್‌ ಇಲಾಖೆ, ಅವರ ವಿರುದ್ಧ ಕ್ರಮ ಕೈಗೊಂಡಿತ್ತು. ಇದೀಗ ತ್ರಿಬಲ್ ರೈಡಿಂಗ್ ಜೊತೆಗೆ ವ್ಹೀಲಿಂಗ್ ಮಾಡಿದವರ ವಿರುದ್ಧ ಕ್ರಮಕ್ಕೆ ಒತ್ತಾಯ ಮಾಡಲಾಗುತ್ತಿದೆ. ಅಲ್ಲದೇ ಸೋಷಿಯಲ್‌ ಮೀಡಿಯಾದಲ್ಲಿ ವಿಡಿಯೋ ಸಹ ವೈರಲ್‌ ಆಗುತ್ತಿದೆ. 

ಇದನ್ನೂ ವೀಕ್ಷಿಸಿ: ಒಬ್ಬ ಮಂತ್ರಿಯಾಗಿ ಸಾಮಾನ್ಯ ಪ್ರಜೆಗೆ ಆಡುವ ಮಾತಾ ಇದು: ಎಂ.ಬಿ.ಪಾಟೀಲ್‌ ಹೇಳಿಕೆಗೆ ಸೂಲಿಬೆಲೆ ತಿರುಗೇಟು

Video Top Stories