ಮುರುಘಾ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; ಶ್ರೀಗಳಿಗೆ ಮಠಾಧೀಶರು, ಮುಖಂಡರಿಂದ ಧೈರ್ಯ

ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಹಲವು ಮುಖಂಡರು ಅವರಿಗೆ ಧೈರ್ಯ ತುಂಬಿದ್ದಾರೆ. 

Share this Video
  • FB
  • Linkdin
  • Whatsapp

ಮುರುಘಾ ಶ್ರೀ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಪಟ್ಟಂತೆ ಶ್ರಿಗಳಿಗೆ ಮಠಾಧೀಶರು ಹಾಗೂ ಮುಖಂಡರು ಧೈರ್ಯ ತುಂಬಿದ್ದಾರೆ. ಮಧ್ಯರಾತ್ರಿ ಮಠಕ್ಕೆ ಕೆ.ಸಿ. ವೀರೇಂದ್ರ ಪಪ್ಪಿ ಹಾಗೂ ಜಿತೇಂದ್ರ ಸೇರಿ ಹಲವು ನಾಯಕರು ಭೇಟಿ ನೀಡಿದ್ದು, ಮುಂದಿನ ಹೋರಾಟದ ಬಗ್ಗೆ ಶ್ರೀಗಳ ಜತೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಹಾಗೂ, ಸಂಧಾನಕ್ಕೆ ಮುರುಘಾ ಶ್ರೀಗಳ ಕೆಲ ಅಪ್ತರು ಪ್ರಯತ್ನ ನಡೆಸಿದ್ದಾರೆ ಎಂದೂ ಹೇಳಲಾಗಿದೆ. ಇಂದು ಸಹ ಭಕ್ತರು, ಮುಖಂಢರು ಮಠಾಧೀಶರನ್ನು ಭೇಟಿಯಾಗಲಿದ್ದಾರೆ.

Related Video