ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಸಚಿವ ವಿ. ಸೋಮಣ್ಣ ಕಪಾಳಮೋಕ್ಷ

ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಯೊಬ್ಬರಿಗೆ ಸಚಿವ ವಿ. ಸೋಮಣ್ಣ ಕಪಾಳಮೋಕ್ಷ ಮಾಡಿದ ಘಟನೆ, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ನಡೆದಿದೆ.

First Published Oct 23, 2022, 12:06 PM IST | Last Updated Oct 23, 2022, 3:53 PM IST

ಹಂಗಳ ಗ್ರಾಮದಲ್ಲಿ ನಿನ್ನೆ 175 ಜನರಿಗೆ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಮಧ್ಯಾಹ್ನ 3.30ಕ್ಕೆ ಕಾರ್ಯಕ್ರಮ ಇತ್ತು, ಆದರೆ ಸಚಿವರು ಸಂಜೆ 6.30ಕ್ಕೆ ಬಂದ ಕಾರಣ ಈ ವೇಳೆ ನಿವೇಶನದ ಹಕ್ಕುಪತ್ರ ಪಡೆಯಲು ನೂಕುನುಗ್ಗಲು ಉಂಟಾಗಿತ್ತು. ಇದೇ ವೇಳೆ ಮಹಿಳೆಯೊಬ್ಬರು ತಮ್ಮ ಸಮಸ್ಯೆ ಹೇಳಿಕೊಳ್ಳಲು ಸಚಿವರ ಬಳಿ ಬಂದಿದ್ದು, ಆ ಮಹಿಳೆಗೆ ಸೋಮಣ್ಣ ಕಪಾಳಮೋಕ್ಷ ಮಾಡಿದ್ದಾರೆ. ಘಟನೆಯಿಂದ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ನಂತರ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಭಾರತದಿಂದ ಎಸ್ಕೇಪ್ ಆಗಲು ಪ್ರಯತ್ನ, ಸಾಕ್ಷ್ಯ ನಾಶ; ಜಾಕ್ವೆಲಿನ್ ಬಗ್ಗೆ ಶಾಕಿಂಗ್ ವಿಚಾರ ಬಿಚ್ಚಿಟ್ಟ ED
 

Video Top Stories