ಅಯೋಧ್ಯೆಯಲ್ಲಿ ದೀಪಾವಳಿ ಸಂಭ್ರಮ: ಸರಯೂ ಆರತಿಯಲ್ಲಿ 'ನಮೋ' ಭಾಗಿ
ಇಂದು ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಗೆ ಭೇಟಿ ನೀಡಲಿದ್ದು, ದೀಪೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ರಾಮಜನ್ಮಭೂಮಿಯಲ್ಲಿ ದೀಪಾವಳಿ ಸಂಭ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಇಂದು ಸಂಜೆ ಮೋದಿ ಸರಯೂ ನದಿ ತೀರದಲ್ಲಿ ಆರತಿ ಕಾರ್ಯಕ್ರಮ ವೀಕ್ಷಿಸಿ, ಬಳಿಕ ದೀಪೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಸರಯೂ ನದಿ ತಟದಲ್ಲಿ 4 ದಿನ ದೀಪೋತ್ಸವ ನಡೆಯಲಿದ್ದು, 2ನೇ ಬಾರಿಗೆ ಪ್ರಧಾನಿ ಮೋದಿ ಭಾಗಿಯಾಗುತ್ತಿದ್ದಾರೆ. ರಾಮನ ದರ್ಶನ ಮಾಡಿ ಬಳಿಕ ದೇಗುಲದಲ್ಲಿ ಪೂಜೆಯಲ್ಲಿ ಭಾಗಿಯಾಗಲಿದ್ದಾರೆ. ಜೊತೆಗೆ ರಾಮಮಂದಿರ ನಿರ್ಮಾಣ ಚಟುವಟಿಕೆ ವೀಕ್ಷಿಸಲಿದ್ದಾರೆ. ದೀಪೋತ್ಸವದ ಅಂಗವಾಗಿ 15 ಲಕ್ಷ ದೀಪಗಳನ್ನು ಬೆಳಗಿಸಲಾಗುವುದು.
Diwali Celebration: ಭಾರತದ ಉತ್ತರ ಮತ್ತು ದಕ್ಷಿಣ ಭಾಗದಲ್ಲಿ ದೀಪಾವಳಿಯ ಆಚರಣೆ ಹೀಗಿದೆ