Asianet Suvarna News Asianet Suvarna News

ಪರಂ ಮತ್ತೊಂದು ಕರ್ಮಕಾಂಡ ಬಯಲಿಗೆ? ಐಟಿ ತನಿಖೆಯಿಂದ ಸ್ಫೋಟಕ ಮಾಹಿತಿ ಹೊರಗೆ

ಕೆಲದಿನದ ಹಿಂದೆ ಗ್ರಾಮ ಪಂಚಾಯತ್‌ಗೆ ಕಂದಾಯ ಕಟ್ಟದೇ ಸುದ್ದಿಯಾಗಿದ್ದ ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ.

First Published Dec 16, 2019, 2:56 PM IST | Last Updated Dec 16, 2019, 2:56 PM IST

ಬೆಂಗಳೂರು (ಡಿ.16): ಕೆಲದಿನದ ಹಿಂದೆ ಗ್ರಾಮ ಪಂಚಾಯತ್‌ಗೆ ಕಂದಾಯ ಕಟ್ಟದೇ ಸುದ್ದಿಯಾಗಿದ್ದ ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ.

ಪರಮೇಶ್ವರ್ ಮಾಲೀಕತ್ವದ ಸಂಸ್ಥೆಗಳು ಕಳೆದ ನಾಲ್ಕು ವರ್ಷಗಳಿಂದ ಅಪಾರ ಆದಾಯವಿದ್ದರೂ ತೆರಿಗೆಯನ್ನು ಕಟ್ಟದೆ, ಸರ್ಕಾರಕ್ಕೆ ವಂಚಿಸಿರುವ ಆರೋಪ ಕೇಳಿ ಬಂದಿದೆ.

ಐಟಿ ಅಧಿಕಾರಿಗಳ ತನಿಖೆ ವೇಳೆ ಈ ವಿಚಾರ ಬೆಳಕಿಗೆ ಬಂದಿದ್ದು, ಅಧಿಕಾರಿಗಳು ಮತ್ತಷ್ಟು  ದಾಖಲೆಗಳನ್ನು ಕಲೆಹಾಕುತ್ತಿದ್ದಾರೆ. ಕಳೆದ ಅಕ್ಟೋಬರ್‌ನಲ್ಲಿ ಪರಂ ಸಂಸ್ಥೆಗಳ ಮೇಲೆ ಐಟಿ ದಾಳಿ ನಡೆದಿತ್ತು.