Asianet Suvarna News Asianet Suvarna News

ಹೈಕಮಾಂಡ್‌ ದೊಡ್ಡ ಜವಾಬ್ದಾರಿ ಕೊಟ್ಟಿದೆ, ಸ್ಥಾನಮಾನ ನಿರೀಕ್ಷಿಸಿರಲಿಲ್ಲ: ಬಿಎಸ್‌ವೈ

ಯಡಿಯೂರಪ್ಪ ಅವರಿಗೆ ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಸ್ಥಾನ ನೀಡಲಾಗಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿದ ಬಿಎಸ್‌ವೈ, ಹೈಕಮಾಂಡ್‌ ದೊಡ್ಡ ಜವಾಬ್ದಾರಿ ಕೊಟ್ಟಿದೆ, ಈ ಸ್ಥಾನಮಾನವನ್ನು ನಿರೀಕ್ಷಿಸಿರಲಿಲ್ಲ ಎಂದು ಹೇಳಿದ್ದಾರೆ.

Aug 17, 2022, 7:15 PM IST

ಕೇಂದ್ರ ಸಂಸದೀಯ ಮಂಡಳಿಯಲ್ಲಿ ಯಡಿಯೂರಪ್ಪ ಅವರಿಗೆ ಸ್ಥಾನ ನೀಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಹೈಕಮಾಂಡ್‌ ದೊಡ್ಡ ಜವಾಬ್ದಾರಿ ಕೊಟ್ಟಿದೆ, ಸ್ಥಾನಮಾನ ನಿರೀಕ್ಷಿಸಿರಲಿಲ್ಲ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ನಂತರ ನನ್ನದು ಒಂದೇ ಸಂಕಲ್ಪ ಇದ್ದದ್ದೇ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ‌ ತರಬೇಕು ಅನ್ನೋದು. ಪ್ರಧಾನಿ ಮೋದಿ ಜೊತೆ ಮಾತನಾಡಿದಾಗ ಅವರು ದಕ್ಷಿಣ ಭಾರತದ ಕಡೆಯೂ ಗಮನ ಹರಿಸಿ ಎಂದಿದ್ದಾರೆ. ನನಗೆ ಪಕ್ಷ ಕೊಟ್ಟಿರುವ ಜವಬ್ದಾರಿಯನ್ನ ಅತ್ಯಂತ ವಿನಮ್ರತೆಯಿಂದ ಸ್ವೀಕರಿಸುತ್ತೇನೆ. ರಾಜ್ಯ ಹಾಗೂ ದಕ್ಷಿಣ ಭಾರತದಲ್ಲಿ ಪ್ರವಾಸ ಮಾಡಿ ಪ್ರಾಮಾಣಿಕವಾಗಿ ಕೆಲಸ‌ ಮಾಡ್ತೀನಿ. ನನಗೆ ಕೊಟ್ಟ ಜವಬ್ದಾರಿ ನನಗೆ ಸಂತಸ  ತಂದಿದೆ. ಯಾವ ಕಾರಣಕ್ಕೂ ಮುಂದೆ ಬೇರೆ ಪಕ್ಷ ಅಧಿಕಾರಕ್ಕೆ ಬರೋದಕ್ಕೆ ಬಿಡೋದಿಲ್ಲ. ಮುಂದಿನ ಬಾರಿಯೂ ಬಿಜೆಪಿ ಅಧಿಕಾರಕ್ಕೆ ಬರುತ್ತೆ. ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ, 140 ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆದ್ದು ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ. 

Video Top Stories