ನೂಪುರ್ ಶರ್ಮಾ ಬೆಂಬಲಿಸಿದ್ದಕ್ಕೆ ಹಿಂದೂ ವ್ಯಕ್ತಿಯ ಶಿರಚ್ಛೇದ, ಭಾರತಕ್ಕೂ ಕಾಲಿಡ್ತು ಐಸಿಸ್ ಕ್ರೌರ್ಯ
ನೂಪುರ್ ಶರ್ಮಾ ಸೋಷಿಯಲ್ ಮೀಡಿಯಾದಲ್ಲಿ ಮಾಡಿದ್ದ ಪೋಸ್ಟ್‌ವೊಂದನ್ನು ಶೇರ್ ಮಾಡಿದ್ದ ಕನ್ಹಯ್ಯಾ ಲಾಲ್ ಎಂಬ ವ್ಯಕ್ತಿಯನ್ನು ರಾಜಸ್ಥಾನದ ಉದಯ್‌ಪುರದಲ್ಲಿ ಇಬ್ಬರು ಧರ್ಮಾಂಧ ವ್ಯಕ್ತಿಗಳು ಐಸಿಸ್ ಮಾದರಿಯಲ್ಲಿ ಶಿರಚ್ಛೇದಗೊಳಿಸಿ ಹತ್ಯೆ ಮಾಡಿದ್ದಾರೆ.
ಪ್ರವಾದಿ ಮೊಹಮ್ಮದರ ಕುರಿತು ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ (Nupur Sharma) ಆಡಿದ್ದ ಮಾತು ವಿವಾದವಾಗಿ ದೊಡ್ಡ ಮಟ್ಟದಲ್ಲಿ ಗಲಾಟೆಯಾಗಿತ್ತು. ನೂಪುರ್ ಶರ್ಮಾ ಸೋಷಿಯಲ್ ಮೀಡಿಯಾದಲ್ಲಿ ಮಾಡಿದ್ದ ಪೋಸ್ಟ್‌ವೊಂದನ್ನು ಶೇರ್ ಮಾಡಿದ್ದ ಕನ್ಹಯ್ಯಾ ಲಾಲ್ (Tailor Kanhaiya Lal) ಎಂಬ ವ್ಯಕ್ತಿಯನ್ನು ರಾಜಸ್ಥಾನದ ಉದಯ್‌ಪುರದಲ್ಲಿ ಇಬ್ಬರು ಧರ್ಮಾಂಧ ವ್ಯಕ್ತಿಗಳು ಐಸಿಸ್ ಮಾದರಿಯಲ್ಲಿ ಶಿರಚ್ಛೇದಗೊಳಿಸಿ ಹತ್ಯೆ ಮಾಡಿದ್ದಾರೆ. ಜೊತೆಗೆ ಇಡೀ ಘಟನೆಯನ್ನು ವಿಡಿಯೋ ಮಾಡಿ ಹರಿಯಬಿಟ್ಟಿದ್ದಾರೆ. ಈ ಭೀಕರ ಘಟನೆ ಇಡೀ ದೇಶವನ್ನು ತಲ್ಲಣಗೊಳಿಸಿದ್ದು, ಧರ್ಮಾಂಧರ ಕೃತ್ಯದ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ.
'ಹಿಂದೂಗಳೇ, ಅದು ನಿಮ್ಮ ದೇಶ, ನಿಮ್ಮ ತಾಯ್ನೆಲ' ಉದಯಪುರ ಹತ್ಯೆಯನ್ನು ಖಂಡಿಸಿದ ಡಚ್ ಸಂಸದ!
ಘಟನೆ ನಡೆದ ಕೆಲ ಹೊತ್ತಿನಲ್ಲೇ ನೆರೆಯ ರಾಜ್‌ಸಮಂದ್ ಜಿಲ್ಲೆಯಲ್ಲಿ ಆರೋಪಿಗಳಾದ ಮಹಮ್ಮದ್ ರಿಯಾಜ್ ಅಖ್ತಾರಿ ಮತ್ತು ಮಹಮ್ಮದ್ ಎಂಬಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ಹಿನ್ನೆಲೆಯಲ್ಲಿ ಉದಯ್‌ಪುರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಘಟನೆಯನ್ನು ಕಟುವಾಗಿ ಟೀಕಿಸಿರುವ ಬಿಜೆಪಿ, ರಾಜಸ್ಥಾನ ತಾಲಿಬಾನ್ ರಾಜ್ಯವಾಗುವತ್ತ ಹೆಜ್ಜೆ ಇಟ್ಟಿದೆ ಎಂದು ಕಿಡಿಕಾರಿದೆ.
ಏನಾಯ್ತು?:
ಉದಯ್‌ಪುರದ ಧನಮಂಡಿ ಪ್ರದೇಶದಲ್ಲಿರುವ ಕನ್ಹಯ್ಯಾ ಲಾಲ್ ಎಂಬಾತನ ಟೈಲರ್ ಅಂಗಡಿಗೆ ಆಗಮಿಸಿದ ಮಹಮ್ಮದ್ ರಿಯಾಜ್ ಅಖ್ತಾರಿ ಮತ್ತು ಮಹಮ್ಮದ್ ಬಟ್ಟೆಹೊಲೆಸುವ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಅಂಗಿಯ ಅಳತೆಯನ್ನು ಕನ್ಹಯ್ಯಾ ಲಾಲ್ ತೆಗೆದುಕೊಳ್ಳುವ ವೇಳೆ ಏಕಾಏಕಿ ದೊಡ್ಡ ಆಯುಧವೊಂದನ್ನು ಹೊರತೆಗೆದ ರಿಯಾಜ್ ಕತ್ತು ಕತ್ತರಿಸಿ ಹಾಕಿದ್ದಾನೆ. ಈ ಇಡೀ ಘಟನಾವಳಿಗಳನ್ನು ಮೊಹಮ್ಮದ್ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾನೆ. ಬಳಿಕ ಇಬ್ಬರೂ ಅಲ್ಲಿಂದ ಪರಾರಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮತ್ತು ನೆರೆಯ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.