Asianet Suvarna News Asianet Suvarna News

ಇಬ್ರೂ ಅವ್ರೇ: ಸಿದ್ದು, ದೇವೇಗೌಡರಿಗೆ ಶ್ರೀನಿವಾಸ್ ‘ಪ್ರಸಾದ’!

Aug 23, 2019, 9:06 PM IST

ಮೈಸೂರು(ಆ.23): ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರದ್ದು ಬೆನ್ನಿಗೆ ಚೂರಿ ಹಾಕುವ ರಾಜಕಾರಣ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಚಾಮರಾಜನಗರ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್  ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯ ಕೂಡ ಹಲವರಿಗೆ ಚೂರಿ ಹಾಕಿಯೇ ಮೇಲೆ ಬಂದಿದ್ದಾರೆ ಎಂದು ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.  ದಿನಕ್ಕೊಂದು ಹೇಳಿಕೆ ನೀಡುವ ಮೂಲಕ ರಾಜ್ಯದ ಜನರ ಮುಂದೆ ನಗೆಪಾಟಲಿಗಿಡಾಡುವಬದಲು ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತು ಜವಾಬ್ದಾರಿಯಿಂದ ಕೆಲಸ ಮಾಡುವಂತೆ ಶ್ರೀನಿವಾಸ್ ಪ್ರಸಾದ್ ಸಲಹೆ ನೀಡಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...

Video Top Stories