ಸಿಎಂ ಆಗಿ ಎರಡೇ ತಿಂಗಳಲ್ಲಿ BSY ಸೈಡ್‌ಲೈನ್? ಕಮಲ ಪಾಳೆಯದಲ್ಲಿ ಗೌಪ್ಯ ಮೀಟಿಂಗ್!
ಸಿಎಂ ಬಿ.ಎಸ್. ಯಡಿಯೂರಪ್ಪರನ್ನು ಬಿಜೆಪಿಯಲ್ಲಿ ಮೂಲೆಗುಂಪಾಗಿಸುವ ಪ್ರಯತ್ನ ನಡೆಯುತ್ತಿದೆಯಾ? ಎಂಬ ಪ್ರಶ್ನೆಗಳು ಹುಟ್ಟಿಕೊಳ್ಳುತ್ತಿವೆ. ಯಡಿಯೂರಪ್ಪ ಅನುಪಸ್ಥಿತಿಯಲ್ಲಿ ಪಕ್ಷದ ಇತರ ನಾಯಕರು ಅನರ್ಹ ಶಾಸಕರೊಂದಿಗೆ ಗೌಪ್ಯ ಸಭೆ ನಡೆಸಿರುವುದು ಈಗ ಚರ್ಚೆಗೆ ಕಾರಣವಾಗಿದೆ. ನೆರೆ ಪರಿಹಾರ ಪರಿಶೀಲನೆಗೆ ಯಡಿಯೂರಪ್ಪ ಉತ್ತರ ಕರ್ನಾಟಕ ಪ್ರವಾಸದಲ್ಲಿದ್ದಾಗ, ಇತ್ತ ಆ ಸಭೆ ನಡೆದಿದೆ.
ಬೆಂಗಳೂರು (ಅ.07): ಸಿಎಂ ಬಿ.ಎಸ್.ಯಡಿಯೂರಪ್ಪರನ್ನು ಬಿಜೆಪಿಯಲ್ಲಿ ಮೂಲೆಗುಂಪಾಗಿಸುವ ಪ್ರಯತ್ನ ನಡೆಯುತ್ತಿದೆಯಾ? ಎಂಬ ಪ್ರಶ್ನೆಗಳು ಹುಟ್ಟಿಕೊಳ್ಳುತ್ತಿವೆ.
ಯಡಿಯೂರಪ್ಪ ಅನುಪಸ್ಥಿತಿಯಲ್ಲಿ ಪಕ್ಷದ ಇತರ ನಾಯಕರು ಅನರ್ಹ ಶಾಸಕರೊಂದಿಗೆ ಗೌಪ್ಯ ಸಭೆ ನಡೆಸಿರುವುದು ಈಗ ಚರ್ಚೆಗೆ ಕಾರಣವಾಗಿದೆ. ನೆರೆ ಪರಿಹಾರ ಪರಿಶೀಲನೆಗೆ ಯಡಿಯೂರಪ್ಪ ಉತ್ತರ ಕರ್ನಾಟಕ ಪ್ರವಾಸದಲ್ಲಿದ್ದಾಗ, ಇತ್ತ ಆ ಸಭೆ ನಡೆದಿದೆ.
ಕೆಲದಿನಗಳ ಹಿಂದೆ, ನಾನು ತಂತಿ ಮೇಲೆ ನಡೆಯುತ್ತಿದ್ದೇನೆ ಎಂದು ಯಡಿಯೂರಪ್ಪ ಹೇಳಿದ್ದು ಚರ್ಚೆಗೆ ಗ್ರಾಸವಾಗಿತ್ತು. ಬಳಿಕ ಅದಕ್ಕೆ ಸ್ಪಷ್ಟೀಕರಣ ನೀಡಿ ವಿವಾದವನ್ನು ತಿಳಿಗೊಳಿಸಿದ್ದರು.