Asianet Suvarna News Asianet Suvarna News

ಪೌರತ್ವ ಮಸೂದೆ ಪಾಸ್:  ಕಟ್ಟೆಯೊಡೆದ ವಿದ್ಯಾರ್ಥಿಗಳ ಆಕ್ರೋಶ, ಮೆಟ್ರೋ ಬಂದ್

ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದವರ ಆಕ್ರೋಶ ಭುಗಿಲೆದ್ದಿದೆ. ಸಂಸತ್ ಭವನಕ್ಕೆ ಪ್ರತಿಭಟನೆ ಹಮ್ಮಿಕೊಂಡಿದ್ದ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳನ್ನು ಪೊಲೀಸರು ತಡೆದಾಗ ಆಕ್ರೋಶದ ಕಟ್ಟೆ ಒಡೆದಿದೆ. 

ನವದೆಹಲಿ(ಡಿ. 13) ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದವರ ಆಕ್ರೋಶ ಭುಗಿಲೆದ್ದಿದೆ. ಸಂಸತ್ ಭವನಕ್ಕೆ ಪ್ರತಿಭಟನೆ ಹಮ್ಮಿಕೊಂಡಿದ್ದ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳನ್ನು ಪೊಲೀಸರು ತಡೆದಾಗ ಆಕ್ರೋಶದ ಕಟ್ಟೆ ಒಡೆದಿದೆ. 

ವಿಶ್ವವಿದ್ಯಾನಿಲಯದ ಆವರಣದಿಂದ ಪ್ರತಿಭಟನೆ ಹೊರಟಾಗ ಪೊಲೀಸರು ಅಶ್ರವಾಯು ಸಿಡಿಸಿ ಲಘು ಲಾಠಿ ಪ್ರಹಾರ ನಡೆಸಿದರು. ಗಾಯಗೊಂಡ ವಿದ್ಯಾರ್ಥಿಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಪ್ರತಿಭಟನೆ ಕಾರಣ ಕೆಲ ಕಾಲ ದೆಹಲಿ ಮೆಟ್ರೋದ  ಪಟೇಲ್ ಚೌಕ್ ಮತ್ತು ಜನಪಥ್ ನಿಲ್ದಾಣ ಬಂದ್ ಮಾಡಲಾಗಿತ್ತು.

ಏನಿದು ಪೌರತ್ವ ತಿದ್ದುಪಡಿ ಮಸೂದೆ, ಯಾರಿಗೆ ಲಾಭ? ಯಾರಿಗೆ ನಷ್ಟ?

ಅಪಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಲ್ಲಿ ಕಿರುಕುಳ ಅನುಭವಿಸಿ ಭಾರತಕ್ಕೆ ಆಗಮಿಸುವ ಮುಸ್ಲಿಮೇತರ ಸಮುದಾಯದವರಿಗೆ ಭಾರತದ ಪೌರತ್ವ ನೀಡುವ ಪೌರತ್ವ ತಿದ್ದುಪಡಿ ಮಸೂದೆಯನ್ನು ಸಂಸತ್ತು ಮಾನ್ಯ ಮಾಡಿದೆ. ಕಾಂಗ್ರೆಸ್ ಮತ್ತು ಎಡಪಕ್ಷಗಳು ಮಸೂದೆಯನ್ನು ವಿರೋಧಿಸಿಕೊಂಡು ಬಂದಿವೆ.