Asianet Suvarna News Asianet Suvarna News

ಲೋಕಾಯುಕ್ತ ದಾಳಿ: ಸಿಎಂ ಬೊಮ್ಮಾಯಿ ಫಸ್ಟ್ ರಿಯಾಕ್ಷನ್

ಬಿಜೆಪಿ ಚೆನ್ನಗಿರಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ನಿನ್ನೆ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು: ಬಿಜೆಪಿ ಚೆನ್ನಗಿರಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ನಿನ್ನೆ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಪ್ರತಿಕ್ರಿಯಿಸಿದ್ದಾರೆ.  ಲೋಕಾಯುಕ್ತ ಸ್ಥಾಪಿಸಿದ್ದೆ ಭ್ರಷ್ಟಾಚಾರ ನಿರ್ಮೂಲನೆಗಾಗಿ,  ಆದರೆ ಇದನ್ನು ಕಾಂಗ್ರೆಸ್ ಸರ್ಕಾರವಿದ್ದಾಗ ಮುಚ್ಚಲಾಯಿತು. ನ್ಯಾಯ ಸಮ್ಮತವಾಗಿ ತನಿಖೆಯಾಗಲಿ ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ ಎಂದು ಸಿಎಂ ಹೇಳಿದರು. ಲೋಕಾಯುಕ್ತ ಮುಚ್ಚಿದ್ದೆ  ಕಾಂಗ್ರೆಸ್‌ನವರು, ನಾವಲ್ಲ, ನಮಗೆ ಏನನ್ನು ಮುಚ್ಚಿಡುವ ಅಗತ್ಯವಿಲ್ಲ. ಕಾಂಗ್ರೆಸ್‌ನವರು ಈ ಪ್ರಕರಣವನ್ನು ಇಟ್ಟುಕೊಂಡು ತಾವು ಸಾಚಾ ಎಂದು ಬಿಂಬಿಸುವ ಪ್ರಯತ್ನವನ್ನು ಮಾಡುತ್ತಿದ್ದಾರೆ. ಆದರೆ ಇದು ಸಾಧ್ಯವಿಲ್ಲ. ಕಾಂಗ್ರೆಸ್ ಮುಚ್ಚಿ ಹಾಕಿದ ಪ್ರಕರಣವನ್ನು ಕೂಡ ಲೋಕಾಯುಕ್ತಕ್ಕೆ ನೀಡಿ ತನಿಖೆ ಮಾಡಲಾಗುವುದು ಎಂದು ಸಿಎಂ ಹೇಳಿದ್ದಾರೆ.  ನಿನ್ನೆ BWSS ನಲ್ಲಿ ಚೀಫ್ ಇಂಜಿನಿಯರ್ ಆಗಿರುವ ಪ್ರಶಾಂತ್ ಮಾಡಾಳ್ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಕೆಡವಿತ್ತು. ಇದಾದ ಮೇಲೆ ಇಂದು ಕೂಡ ಪ್ರಶಾಂತ್ ಮಾಡಾಳ್ ನಿವಾಸ ಕಚೇರಿ ಮೇಲೆ ದಾಳಿ ನಡೆಸಿದ್ದು, ಕೋಟಿ ಕೋಟಿ ಹಣ ಪತ್ತೆಯಾಗಿದೆ. 

Video Top Stories