Asianet Suvarna News Asianet Suvarna News

ಪ್ರವಾಹ ಸಂತ್ರಸ್ತರ ಸುರಕ್ಷತೆ, ಪುನರ್ವಸತಿಗೆ ಬದ್ಧ: ಸಿಎಂ ಯಡಿಯೂರಪ್ಪ

Aug 10, 2019, 4:57 PM IST

ಬೆಂಗಳೂರು (ಆ.10) ರಾಜ್ಯದ 17 ಜಿಲ್ಲೆಗಳ 80 ತಾಲೂಕುಗಳು ನೆರೆ ಪೀಡಿತವಾಗಿವೆ.  235105 ಜನರನ್ನು ಸುರಕ್ಷಿತ ಸ್ಥಳಕ್ಕೆ ಈಗಾಗಲೇ ಸ್ಥಳಾಂತರಿಸಲಾಗಿದೆ. 157998 ಸಂತ್ರಸ್ತರು ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ. ಒಟ್ಟು 322448 ಎಕರೆ ಕೃಷಿ ಭೂಮಿ ಹಾಳಾಗಿದೆ. ಮಂಗಳೂರಿಗೆ ರೈಲು ಮತ್ತು ರಸ್ತೆ ಸಂಪರ್ಕ‌ ಕಡಿದುಹೋಗಿದೆ. ಕೊಡಗಿನಲ್ಲಿ ಭೂಕುಸಿತ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ಸಂತ್ರಸ್ತರ ಸುರಕ್ಷತೆ ಮತ್ತು ಪುನರ್ವಸತಿಗೆ ಬದ್ಧ ಎಂದಿದ್ದಾರೆ.