ಪುಲ್ವಾಮಾ ಮಾಸ್ಟರ್ ಮೈಂಡ್ ಮಸೂದ್ ಅಜರ್ ಗೊಟಕ್?

ಜೈಷ್-ಎ-ಮೊಹ್ಮದ್ ಉಗ್ರ ಸಂಘಟನೆ ಮುಖ್ಯಸ್ಥ, ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಮೌಲಾನಾ ಮಸೂದ್‌ ಅಜರ್‌ ಮೃತಪಟ್ಟಿದ್ದಾನೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ.

Share this Video
  • FB
  • Linkdin
  • Whatsapp

ನವದೆಹಲಿ(ಮಾ.03): ಜೈಷ್-ಎ-ಮೊಹ್ಮದ್ ಉಗ್ರ ಸಂಘಟನೆ ಮುಖ್ಯಸ್ಥ, ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಮೌಲಾನಾ ಮಸೂದ್‌ ಅಜರ್‌ ಮೃತಪಟ್ಟಿದ್ದಾನೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ. ಬಾಲಕೋಟ್‌ ಮೇಲೆ ಇತ್ತೀಚೆಗೆ ಭಾರತ ನಡೆಸಿದ ದಾಳಿಯಲ್ಲಿ ಅಜರ್‌ ಮಸೂದ್‌ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ ಎನ್ನಲಾಗಿದೆ. ಆದರೆ ಈ ಬಗ್ಗೆ ಪಾಕಿಸ್ತಾನ ಸರಕಾರ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಮಸೂದ್ ಅಜರ್ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದು, ಪಾಕಿಸ್ತಾನದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

Related Video