Asianet Suvarna News Asianet Suvarna News

RT ನಗರದಲ್ಲಿ ಮಾಸ್ಕ್ ಜಾಗೃತಿ ಮೂಡಿಸಿದ DCP ಶಶಿಕುಮಾರ್

ಸಾರ್ವಜನಿಕರು ಹಾಗೂ ಅಂಗಡಿ ಮಾಲೀಕರಿಗೆ ಮಾಸ್ಕ್ ಕುರಿತಂತೆ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ ಡಿಸಿಪಿ ಶಶಿಕುಮಾರ್. ಮಾಸ್ಕ್ ಧರಿಸದ ಹಾಗೆಯೇ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳದವರಿಗೆ ಡಿಸಿಪಿ ಶಶಿ ಕುಮಾರ್ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಬೆಂಗಳೂರು(ಜೂ.27): ಕೊರೋನಾ ವೈರಸ್‌ನಿಂದ ಸದ್ಯಕ್ಕೆ ಬಚಾವಾಗಲು ಉಳಿದಿರುವ ದಾರಿಯೆಂದರೆ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು ಹಾಗೂ ಮಾಸ್ಕ್ ಧರಿಸಬೇಕು. ಹೀಗಾಗಿ ಬೆಂಗಳೂರು ಪೊಲೀಸ್ ಇಲಾಖೆ ಈ ಕುರಿತಂತೆ ಸಾಕಷ್ಟು ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಾ ಬಂದಿದೆ. 

RT ನಗರದಲ್ಲಿ ಸಾರ್ವಜನಿಕರು ಹಾಗೂ ಅಂಗಡಿ ಮಾಲೀಕರಿಗೆ ಮಾಸ್ಕ್ ಕುರಿತಂತೆ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ ಡಿಸಿಪಿ ಶಶಿಕುಮಾರ್. ಮಾಸ್ಕ್ ಧರಿಸದ ಹಾಗೆಯೇ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳದವರಿಗೆ ಡಿಸಿಪಿ ಶಶಿ ಕುಮಾರ್ ತರಾಟೆಗೆ ತೆಗೆದುಕೊಂಡಿದ್ದಾರೆ.

BSYಗೆ ವರದಿ ನೀಡಿದ ಟಾಸ್ಕ್ ಫೋರ್ಸ್ : ಅಂತರ್ ಜಿಲ್ಲಾ ಓಡಾಟಕ್ಕೆ ಬೀಳುತ್ತಾ ಬ್ರೇಕ್?

ಇನ್ನು ಬಿಟಿಎಂ ಲೇಔಟ್‌ನಲ್ಲೂ ಮಾಸ್ಕ್ ಧರಿಸದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಮಾಸ್ಕ್ ಧರಿಸದವರಿಗೆ ಪೊಲೀಸರು ಸ್ಥಳದಲ್ಲೇ ದಂಡ ವಿಧಿಸಿದ್ದಾರೆ. ಕೊರೋನಾ ತಡೆಯುವ ನಿಟ್ಟಿನಲ್ಲಿ ಮತ್ತಷ್ಟು ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿಕೆ ಬೆನ್ನಲ್ಲೇ ಖಾಕಿ ಪಡೆ ಫುಲ್ ಅಲರ್ಟ್ ಆಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

Video Top Stories