Asianet Suvarna News Asianet Suvarna News

IMAನಲ್ಲಿ ಚಿನ್ನ ಇಟ್ಟ ಗ್ರಾಹಕರಿಗೆ ಕೊಂಚ ರಿಲೀಫ್!

IMA ಬಹುಕೋಟಿ ವಂಚನೆ ಪ್ರಕರಣದ ತನಿಖೆ ಮುಂದುವರಿದಿದೆ. ಈ ನಡುವೆ, IMAನಲ್ಲಿ ಚಿನ್ನಾಭರಣ ಅಡವಿಟ್ಟ ಗ್ರಾಹಕರಿಗೆ ಕೊಂಚ ನಿರಾಳರಾಗುವ ಸುದ್ದಿಯೊಂದು ಬಂದಿದೆ.  

 

ಬೆಂಗಳೂರು (ಜೂ.24): IMA ಬಹುಕೋಟಿ ವಂಚನೆ ಪ್ರಕರಣದ ತನಿಖೆ ಮುಂದುವರಿದಿದೆ. ಈ ನಡುವೆ, IMAನಲ್ಲಿ ಚಿನ್ನಾಭರಣ ಅಡವಿಟ್ಟ ಗ್ರಾಹಕರಿಗೆ ಕೊಂಚ ನಿರಾಳರಾಗುವ ಸುದ್ದಿಯೊಂದು ಬಂದಿದೆ.  

SIT ಅಧಿಕಾರಿಗಳು ತಪಾಸಣೆ ನಡೆಸಿದ ವೇಳೆ, ಅಡವಿಡಲಾದ ಚಿನ್ನಾಭರಣಗಳು ಪತ್ತೆಯಾಗಿವೆ. IMA ಸಿಬ್ಬಂದಿಯನ್ನು ಜೊತೆಗೆ ಕರೆದುಕೊಂಡು ಹೋದ SIT ಸಿಬ್ಬಂದಿ, ಈ ವಿಚಾರವನ್ನು ಖಾತ್ರಿಪಡಿಸಿಕೊಂಡಿದ್ದಾರೆ ಎಂಬ ಮಾಹಿತಿ ಸುವರ್ಣನ್ಯೂಸ್‌ಗೆ ಸಿಕ್ಕಿದೆ. ಐನೂರಕ್ಕಿಂತಲೂ ಹೆಚ್ಚು ಮಂದಿ IMAನಲ್ಲಿ ಚಿನ್ನಾಭರಣಗಳನ್ನು ಅಡಮಾನವಿಟ್ಟಿದ್ದರು ಎಂದು ಹೇಳಲಾಗುತ್ತಿದೆ.

ಹಲಾಲ್ ಹೂಡಿಕೆ ಹೆಸರಿನಲ್ಲಿ ಹೂಡಿಕೆದಾರರಿಂದ ಕೋಟ್ಯಂತರ ರೂಪಾಯಿ ಹಣ ಪಡೆದು ಮಾಲೀಕ ಮನ್ಸೂರ್ ಖಾನ್ ನಾಪತ್ತೆಯಾಗಿದ್ದಾನೆ. ಆತ ಚಿನ್ನವನ್ನು ತನ್ನೊಂದಿಗೆ ಕೊಂಡೊಯ್ದಿದ್ದಾನೆ ಎಂದು ಶಂಕಿಸಲಾಗಿತ್ತು.