Asianet Suvarna News Asianet Suvarna News

ವಿಶ್ವಸಂಸ್ಥೆಯಲ್ಲಿ ಗುದ್ದಾಡಿ ತಮಿಳುನಾಡಿನಲ್ಲಿ ಮುದ್ದಾಡುತ್ತಿರುವ ಮೋದಿ-ಕ್ಸಿ!

ಭಾರತ ಹಾಗೂ ಚೀನಾದ ಮುಖ್ಯಸ್ಥರ ನಡುವೆ ಮತ್ತೊಂದು ಅನೌಪಚಾರಿಕ ಸಭೆ ಇಂದು ತಮಿಳುನಾಡಿನ ಮಾಮಲ್ಲಾಪುರಂನಲ್ಲಿ ನಡೆಯುತ್ತಿದೆ. ಕ್ಸಿ ಜಿನ್'ಪಿಂಗ್ ಅವರನ್ನು ಸ್ವಾಗತಿಸಲು ಸ್ವತಃ ಪ್ರಧಾನಿಯೇ ವಿಮಾನ ನಿಲ್ದಾಣಕ್ಕೆ ತೆರಳಿದ್ದು, ಚೀನಾ ಅಧ್ಯಕ್ಷರನ್ನು ಅತ್ಯಂತ ಆತ್ಮೀಯವಾಗಿ ಬರಮಾಡಿಕೊಂಡರು.

ಚೆನ್ನೈ(ಅ.11): ಭಾರತ ಹಾಗೂ ಚೀನಾದ ಮುಖ್ಯಸ್ಥರ ನಡುವೆ ಮತ್ತೊಂದು ಅನೌಪಚಾರಿಕ ಸಭೆ ಇಂದು ತಮಿಳುನಾಡಿನ ಮಾಮಲ್ಲಾಪುರಂನಲ್ಲಿ ನಡೆಯುತ್ತಿದೆ. ಸದ್ಯ ನರೇಂದ್ರ ಮೋದಿ ಅವರ ಮೂರನೇ ಅನೌಪಚಾರಿಕ ಸಭೆ ಹಾಗೂ ಚೀನಾ ಅಧ್ಯಕ್ಷರೊಂದಿಗಿನ 2ನೇ ಅನೌಪಚಾರಿಕ ಶೃಂಗ ತಮಿಳುನಾಡಿನ ಕಡಲತಡಿಯ ಪ್ರವಾಸಿ ತಾಣ ಮಾಮಲ್ಲಾಪುರಂನಲ್ಲಿ ಆಯೋಜಿತವಾಗಿದೆ. ಈ ವೇಳೆ ದ್ವಿಪಕ್ಷೀಯ ಪ್ರಾದೇಶಿಕ ಹಾಗೂ ಅಂತಾರಾಷ್ಟ್ರೀಯ ಮಹತ್ವದ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಯಲಿದೆ. ಚೀನಾ ಹಾಗೂ ಭಾರತದ ನಡುವಿನ ಸಂಬಂಧಕ್ಕೆ 2000 ವರ್ಷಗಳ ಇತಿಹಾಸವಿದೆ. ಪಲ್ಲವರ ಆಳ್ವಿಕೆಗೆ ಒಳಪಟ್ಟಿದ್ದ ಚೆನ್ನೈನಿಂದ 50 ಕಿ.ಮೀ. ದೂರವಿರುವ ಮಾಮಲ್ಲಾಪುರಂ ಪಟ್ಟಣ ಹಾಗೂ ಚೀನಾದ ನಡುವೆ ಪ್ರಾಚೀನ ಕಾಲದಲ್ಲೇ ರಕ್ಷಣಾ ಹಾಗೂ ವ್ಯಾಪಾರ ಒಪ್ಪಂದ ನಡೆದಿತ್ತು ಎನ್ನಲಾಗಿದೆ. ಉತ್ಖನನದ ವೇಳೆ ಲಭಿಸಿರುವ ನಾಣ್ಯಗಳು ಮತ್ತು ಚಿಹ್ನೆಗಳು ಇದನ್ನು ದೃಢಪಡಿಸಿವೆ. ಪಲ್ಲವರಿಗೂ ಮುನ್ನವೇ ಅಸ್ತಿತ್ವದಲ್ಲಿದ್ದ ಈ ಪಟ್ಟಣ, ಭಾರತ ಮತ್ತು ಚೀನಾ ನಡುವೆ ರೇಷ್ಮೆ ಹಾಗೂ ಸಂಬಾರ ಪದಾರ್ಥಗಳ ವ್ಯಾಪಾರದಲ್ಲಿ ಮುಖ್ಯ ಪಾತ್ರ ವಹಿಸಿತ್ತು. ಈ ಹಿನ್ನೆಲೆಯಲ್ಲಿ ಮಾಮಲ್ಲಾಪುರಂನಲ್ಲಿ ಶೃಂಗಸಭೆ ನಡೆಯುತ್ತಿದೆ. ಕ್ಸಿ ಜಿನ್'ಪಿಂಗ್ ಅವರನ್ನು ಪ್ರಧಾನಿ ಮೋದಿ ಅತ್ಯಂತ ಆತ್ಮೀಯವಾಗಿ ಬರಮಾಡಿಕೊಂಡರು. ಇದಕ್ಕೂ ಮೊದಲು ನಿಗದಿತ ಸಮಯಕ್ಕೂ ಮೊದಲೇ ಚೆನ್ನೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಸತಮಿಳುನಾಡು ಸಿಎಂ ಪಳನಿಸ್ವಾಮಿ ಅತ್ಯಂತ ಅದ್ದೂರಿಯಾಗಿ ಬರಮಾಡಿಕೊಂಡರು.

 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..