ರಾಯಚೂರು ಬಿಇ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು: ನ್ಯಾಯಕ್ಕಾಗಿ ಮೊಳಗಿದ ಕೂಗು
ರಾಯಚೂರಿನ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳ ಮೃತದೇಹ ನಗರದ ಮಾಣಿಕ್ ಪ್ರಭು ದೇವಸ್ಥಾನದ ಹಿಂದಿನ ಬೆಟ್ಟದಲ್ಲಿ ಮರಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಅಲ್ಲದೇ ಶವದ ಬಳಿ ಪತ್ತೆಯಾಗಿದ್ದ ಡೆತ್ ನೋಟಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿರುವುದೂ ಬೆಳಕಿಗೆ ಬಂದಿತ್ತು. ಆದರೆ ಪ್ರಕರಣದ ಬೆನ್ನಲ್ಲೇ ಸಾವಿನ ಕುರಿತಾಗಿ ಹಲವಾರು ಅನುಮಾನಗಳು ವ್ಯಕ್ತವಾಗಿದ್ದು, ವಿದ್ಯಾರ್ಥಿನಿ ಸಾವಿಗೆ ನ್ಯಾಯ ಒದಗಿಸಬೇಕೆಂಬ ಕೂಗು ಜಾಸ್ತಿಯಾಗಿತ್ತು. ಇವೆಲ್ಲದರ ಬೆನ್ನಲ್ಲೇ ಸಾವಿನ ಪ್ರಕರಣ ಹೊಸ ಟ್ವಿಸ್ಟ್ ಪಡೆದಿದ್ದು, ಪ್ರಕರಣದ ಎರಡು ದಿನಗಳ ಬಳಿಕ ವಿದ್ಯಾರ್ಥಿನಿಯ ಸ್ನೇಹಿತ ಸುದರ್ಶನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. .
ರಾಯಚೂರು[ಏ.19]: ರಾಯಚೂರಿನ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳ ಮೃತದೇಹ ನಗರದ ಮಾಣಿಕ್ ಪ್ರಭು ದೇವಸ್ಥಾನದ ಹಿಂದಿನ ಬೆಟ್ಟದಲ್ಲಿ ಮರಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಅಲ್ಲದೇ ಶವದ ಬಳಿ ಪತ್ತೆಯಾಗಿದ್ದ ಡೆತ್ ನೋಟಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿರುವುದೂ ಬೆಳಕಿಗೆ ಬಂದಿತ್ತು.
ಆದರೆ ಪ್ರಕರಣದ ಬೆನ್ನಲ್ಲೇ ಸಾವಿನ ಕುರಿತಾಗಿ ಹಲವಾರು ಅನುಮಾನಗಳು ವ್ಯಕ್ತವಾಗಿದ್ದು, ವಿದ್ಯಾರ್ಥಿನಿ ಸಾವಿಗೆ ನ್ಯಾಯ ಒದಗಿಸಬೇಕೆಂಬ ಕೂಗು ಜಾಸ್ತಿಯಾಗಿತ್ತು. ಇವೆಲ್ಲದರ ಬೆನ್ನಲ್ಲೇ ಸಾವಿನ ಪ್ರಕರಣ ಹೊಸ ಟ್ವಿಸ್ಟ್ ಪಡೆದಿದ್ದು, ಪ್ರಕರಣದ ಎರಡು ದಿನಗಳ ಬಳಿಕ ವಿದ್ಯಾರ್ಥಿನಿಯ ಸ್ನೇಹಿತ ಸುದರ್ಶನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. .