‘ಮನ್ಸೂರ್ ಖಾನ್ ಎಲ್ಲಿದ್ದಾನೆ ಗೊತ್ತಿದೆ!’

ರಾಜ್ಯವನ್ನು ಬೆಚ್ಚಿಬೀಳಿಸಿದ IMA ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಗಳೆದಂತೆ ಹೊಸ ಹೊಸ ಮಾಹಿತಿಗಳು ಹೊರಬೀಳುತ್ತಿವೆ. ಈಗ ಲಭ್ಯವಾಗಿರುವ ಮಾಹಿತಿ ಪ್ರಕಾರ ಮನ್ಸೂರ್ ಖಾನ್ ಎಲ್ಲಿದ್ದಾನೆ ಎಂದು ಪೊಲೀಸರಿಗೆ ತಿಳಿದಿದೆಯಂತೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜೂ.24): ರಾಜ್ಯವನ್ನು ಬೆಚ್ಚಿಬೀಳಿಸಿದ IMA ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಗಳೆದಂತೆ ಹೊಸ ಹೊಸ ಮಾಹಿತಿಗಳು ಹೊರಬೀಳುತ್ತಿವೆ. ಈಗ ಲಭ್ಯವಾಗಿರುವ ಮಾಹಿತಿ ಪ್ರಕಾರ ಮನ್ಸೂರ್ ಖಾನ್ ಎಲ್ಲಿದ್ದಾನೆ ಎಂದು ಪೊಲೀಸರಿಗೆ ತಿಳಿದಿದೆಯಂತೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತಲೆಮರೆಸಿಕೊಂಡ ಬಳಿಕ IMA ಸಂಸ್ಥೆ ಮಾಲೀಕ ಮನ್ಸೂರ್ ಖಾನ್ ಭಾನುವಾರ ವಿಡಿಯೋ ಸಂದೇಶವನ್ನು ಬಿಡುಗಡೆ ಮಾಡಿದ್ದು, ತಾನು ಶರಣಾಗಲು ಸಿದ್ಧ, ನನ್ನ ಜೀವಕ್ಕೆ ಅಪಾಯವಿದೆ ಎಂದು ಹೇಳಿಕೊಂಡಿದ್ದ. ಅದಕ್ಕೆ ಪ್ರತಿಕ್ರಿಯಿಸಿರುವ ಡಿಸಿಪಿ ರವಿಕಾಂತೇಗೌಡ. ಆ ವಿಡಿಯೋವನ್ನು ಫೊರೆನ್ಸಿಕ್ ಪರೀಕ್ಷೆಗೊಳಪಡಿಸುವುದಾಗಿ ತಿಳಿಸಿದರು.

ಲಕ್ಷಾಂತರ ಹೂಡಿಕೆದಾರರನ್ನು ನಡುನೀರಿನಲ್ಲಿ ಬಿಟ್ಟು IMA ಸಂಸ್ಥೆ ಮಾಲೀಕ ಮನ್ಸೂರ್ ಖಾನ್ ನಾಪತ್ತೆಯಾಗಿದ್ದಾನೆ. ಹಲಾಲ್ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ಪಂಗನಾಮ ಹಾಕಿ ಮನ್ಸೂರ್ ಖಾನ್ ವಿದೇಶಕ್ಕೆ ಹಾರಿದ್ದಾನೆ. ಮೊದಲು ಬಿಡುಗಡೆ ಮಾಡಿದ್ದ ಆಡಿಯೋ ಸಂದೇಶದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದ ಖಾನ್, ಹೊಸ ವಿಡಿಯೋದಲ್ಲಿ ಶರಣಾಗುವ ಬಗ್ಗೆ ಮಾತನಾಡಿದ್ದಾನೆ. 

Related Video