ಖೇಲೋ ಇಂಡಿಯಾ ವಿವಿ ಗೇಮ್ಸ್‌ಗೆ ಬೆಂಗಳೂರು ಸಜ್ಜು..!
ಕ್ರೀಡಾಕೂಟದಲ್ಲಿ ಕರ್ನಾಟಕದ 18 ಸೇರಿ ಒಟ್ಟಾರೆ 189 ವಿವಿಗಳು ಪಾಲ್ಗೊಳ್ಳಲಿದ್ದು, 4,529 ಕ್ರೀಡಾಪಟುಗಳು ಸ್ಪರ್ಧಿಸಲಿದ್ದಾರೆ. ಈ ಬಾರಿ ಹೊಸದಾಗಿ ಯೋಗ ಮತ್ತು ಮಲ್ಲಕಂಬವನ್ನು ಸೇರಿಸಲಾಗಿದ್ದು, ಒಟ್ಟು 20 ಸ್ಪರ್ಧೆಗಳು ನಡೆಯಲಿವೆ. ಒಟ್ಟು 275 ಚಿನ್ನದ ಪದಕಗಳನ್ನು ಗೆಲ್ಲಬಹುದಾಗಿದೆ ಎಂದು ಹೇಳಿದ್ದಾರೆ.
ಬೆಂಗಳೂರು(ಏ.12): ಬಹುನಿರೀಕ್ಷಿತ 2ನೇ ಆವೃತ್ತಿಯ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ (Khelo India University Games) 2022ಗೆ ಭರದ ಸಿದ್ಧತೆ ಆರಂಭಗೊಂಡಿದ್ದು, ನಗರದ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಏಪ್ರಿಲ್ 24ರಂದು ಕ್ರೀಡಾಕೂಟಕ್ಕೆ ಚಾಲನೆ ಸಿಗಲಿದೆ. ಕೇಂದ್ರ ಸರ್ಕಾರ, ಭಾರತೀಯ ಕ್ರೀಡಾ ಪ್ರಾಧಿಕಾರ(ಸಾಯ್), ಜೈನ್ ವಿಶ್ವವಿದ್ಯಾನಿಲಯಗಳ ಸಹಭಾಗಿತ್ವದಲ್ಲಿ ಗೇಮ್ಸ್ ನಡೆಯಲಿದ್ದು, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಚಾಲನೆ ನೀಡಲಿದ್ದಾರೆ. ಮೇ 3ಕ್ಕೆ ಕ್ರೀಡಾಕೂಟ ಮುಕ್ತಾಯಗೊಳ್ಳಲಿದೆ.
ಕೇಂದ್ರ ಕ್ರೀಡಾ ಇಲಾಖೆಯ ಕಾರ‍್ಯದರ್ಶಿ ಸುಜಾತಾ ಚತುರ್ವೇದಿ, ಕ್ರೀಡಾಕೂಟದಲ್ಲಿ ಕರ್ನಾಟಕದ 18 ಸೇರಿ ಒಟ್ಟಾರೆ 189 ವಿವಿಗಳು ಪಾಲ್ಗೊಳ್ಳಲಿದ್ದು, 4,529 ಕ್ರೀಡಾಪಟುಗಳು ಸ್ಪರ್ಧಿಸಲಿದ್ದಾರೆ. ಈ ಬಾರಿ ಹೊಸದಾಗಿ ಯೋಗ ಮತ್ತು ಮಲ್ಲಕಂಬವನ್ನು ಸೇರಿಸಲಾಗಿದ್ದು, ಒಟ್ಟು 20 ಸ್ಪರ್ಧೆಗಳು ನಡೆಯಲಿವೆ. ಒಟ್ಟು 275 ಚಿನ್ನದ ಪದಕಗಳನ್ನು ಗೆಲ್ಲಬಹುದಾಗಿದೆ ಎಂದು ಹೇಳಿದ್ದಾರೆ.
Khelo India ಯೂನಿವರ್ಸಿಟಿ ಗೇಮ್ಸ್‌ಗೆ ಬೆಂಗಳೂರಲ್ಲಿ ಭರದ ಸಿದ್ದತೆ
ಉದ್ಘಾಟನಾ ಸಮಾರಂಭ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಬಹುತೇಕ ಸ್ಪರ್ಧೆಗಳು ಜೈನ್ ವಿವಿ ಆವರಣದಲ್ಲಿ ನಡೆಯಲಿವೆ. ಮೊದಲ ಆವೃತ್ತಿಯ ವಿವಿ ಗೇಮ್ಸ್‌ನಲ್ಲಿ ಪಂಜಾಬ್ ವಿವಿ ಮೊದಲ ಸ್ಥಾನ ಪಡೆದಿದ್ದರೆ, ರಾಜ್ಯದ ಮಂಗಳೂರು ವಿವಿ 25 ಪದಕದೊಂದಿಗೆ 5ನೇ ಸ್ಥಾನ ಗಳಿಸಿತ್ತು.