Asianet Suvarna News Asianet Suvarna News

ಕಿಚ್ಚ ಸುದೀಪ್‌ ಹುಟ್ಟುಹಬ್ಬಕ್ಕೆ ಚಿನ್ನದ ಹುಡುಗ ನೀರಜ್ ಚೋಪ್ರಾ ವಿಶ್

Sep 1, 2021, 3:03 PM IST

ಬೆಂಗಳೂರು: ಸ್ಯಾಂಡಲ್‌ವುಡ್‌ನ ಅಭಿನಯ ಚಕ್ರವರ್ತಿ ಖ್ಯಾತಿಯ ಕಿಚ್ಚ ಸುದೀಪ್‌ ದೇಶಾದ್ಯಂತ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಕನ್ನಡ ಮಾತ್ರವಲ್ಲದೇ ತೆಲುಗು ಹಿಂದಿ ಭಾಷೆಯಲ್ಲೂ ಅಭಿನಯಿಸಿ ಸೈ ಎನಿಸಿಕೊಂಡಿರುವ ಸುದೀಪ್‌ ಗುರುವಾರ(ಸೆ.02) ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ನೀರಜ್‌ ಚೋಪ್ರಾ ಶುಭ ಹಾರೈಸಿದ್ದಾರೆ.

ಹೌದು, ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಶತಮಾನಗಳ ಬಳಿಕ ಒಲಿಂಪಿಕ್ಸ್‌ನಲ್ಲಿ ದೇಶಕ್ಕೆ ಚಿನ್ನ ಗೆದ್ದುಕೊಡುವಲ್ಲಿ ನೀರಜ್ ಚೋಪ್ರಾ ಯಶಸ್ವಿಯಾಗಿದ್ದರು. ಈ ಮೂಲಕ ಜಾವೆಲಿನ್ ಥ್ರೋ ಪಟು ನೀರಜ್‌ ಕೋಟ್ಯಾಂತರ ಭಾರತೀಯರ ಹೃದಯವನ್ನು ಗೆದ್ದಿದ್ದರು. ಇದೀಗ ಸುದೀಪ್‌ ಬರ್ತ್‌ ಡೇ ಹಾಗೂ ಮುಂಬರುವ ಬಹುನಿರೀಕ್ಷಿತ ಚಿತ್ರ 'ವಿಕ್ರಾಂತ್‌ ರೋಣ' ಆಲ್‌ ದಿ ಬೆಸ್ಟ್‌ ಹೇಳಿದ್ದಾರೆ.

ಬರ್ತ್‌ಡೇ ದಿನ ಅಭಿಮಾನಿಗಳನ್ನು ಭೇಟಿ ಮಾಡ್ತಾರಾ ಕಿಚ್ಚ ?

ಕೋವಿಡ್‌ ಮೂರನೇ ಅಲೆಯ ಭೀತಿಯಿರುವುದರಿಂದ ಕಿಚ್ಚ ಸುದೀಪ್ ತಮ್ಮ ಹುಟ್ಟುಹಬ್ಬದ ದಿನದಂದು ಅಭಿಮಾನಿಗಳನ್ನು ಭೇಟಿಯಾಗುತ್ತಿಲ್ಲ. ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್‌ ವತಿಯಿಂದ ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿದ್ದು, ಈ ಮೂಲಕ ವಿನೂತನವಾಗಿ ಕಿಚ್ಚನ ಬರ್ತ್‌ ಡೇ ಆಚರಿಸಲು ಮುಂದಾಗಿದ್ದಾರೆ. ತಮ್ಮ ನಟನೆ ಮಾತ್ರವಲ್ಲದೇ ಸಮಾಜಮುಖಿ ಕೆಲಸಗಳ ಮೂಲಕ ಮಿಂಚುತ್ತಿರುವ ಕಿಚ್ಚ ಸುದೀಪ್‌ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌.ಕಾಂ ವತಿಯಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು..