
18 ಹಾಲಿ ಶಾಸಕರಿಗಿಲ್ಲ ಟಿಕೆಟ್: ಇಲ್ಲಿದೆ ಬಿಜೆಪಿ ಹೈಕಮಾಂಡ್ ನಿರ್ಧಾರದ ಹಿಂದಿನ ಕಾರಣ
ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೇವಲ ಒಂದು ವರ್ಷ ಮಾತ್ರ ಬಾಕಿ ಇದೆ. ಆಗಲೇ ಬಿಜೆಪಿ ಕ್ಷೇತ್ರವಾರು ಅಭ್ಯರ್ಥಿಗಳ ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿದೆ. ಇನ್ನು, ಮುಂದಿನ ಅಂದ್ರೆ 2023ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ 18 ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್ ಕಟ್ ಆಗುವ ಸಾಧ್ಯತೆಗಳಿವೆ.
ಬೆಂಗಳೂರು, (ಏ.28): ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೇವಲ ಒಂದು ವರ್ಷ ಮಾತ್ರ ಬಾಕಿ ಇದೆ. ಆಗಲೇ ಬಿಜೆಪಿ ಕ್ಷೇತ್ರವಾರು ಅಭ್ಯರ್ಥಿಗಳ ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿದೆ. ಇನ್ನು, ಮುಂದಿನ ಅಂದ್ರೆ 2023ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ 18 ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್ ಕಟ್ ಆಗುವ ಸಾಧ್ಯತೆಗಳಿವೆ.
18 ಹಾಲಿ ಬಿಜೆಪಿ ಶಾಸಕರಿಗೆ ಮುಂದಿನ ಚುನಾವಣೆಯಲ್ಲಿ ಟಿಕೆಟ್ ಇಲ್ಲ!?
ಹೌದು... 18 ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್ ಕೊಡದಂತೆ ನಾಯಕರೇ ಹೇಳಿದ್ದಾರಂತೆ. ನಿರೀಕ್ಷಿತ ಜನಪ್ರಿಯತೆ ಪಡೆಯುವಲ್ಲಿ ವಿಫಲವಾಗಿದ್ದರಿಂದ 18 ಹಾಲಿ ಶಾಸಕರಿಗೆ ಟಿಕೆಟ್ ನೀಡದಂತೆ ಸಲಹೆ ನೀಡಲಾಗಿದೆ. ರಾಜ್ಯ ಪ್ರವಾಸದ ವೇಳೆ ವರದಿ ಸಿದ್ಧ ಮಾಡಲಾಗಿದ್ದು, ಅದು ಹೈಕಮಾಂಡ್ ಕೈ ಸೇರಲಿದೆ. ಇದರಿಂದ ಆ 18 ಶಾಸಕರಿಗೆ ಟೆನ್ಷನ್ ಶರುವಾಗಿದೆ.