ರಾಜ್ಯದಲ್ಲಿ 2ನೇ ಹಂತದ ಲೋಕಸಭೆ ಚುನಾವಣೆ: ಮೊದಲ ಬಾರಿಗೆ ಅದೃಷ್ಟ ಪರೀಕ್ಷೆಗಿಳಿದ 17 ಅಭ್ಯರ್ಥಿಗಳು!
ಎರಡನೇ ಹಂತದ ಮತದಾನ ಶುರುವಾಗಿದೆ. ಈ ಬಾರಿ 17 ಅಭ್ಯರ್ಥಿಗಳು ಮೊದಲ ಬಾರಿ ಲೋಕ ಅಖಾಡದಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದು, ಕದನಕಣದಲ್ಲಿ ಕಾವು ಜೋರಾಗಿದೆ. 227 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾದ್ರೆ..ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ನೇರಾ ನೇರಾ ಪೈಪೋಟಿ ಏರ್ಪಟ್ಟಿದೆ. 2.59 ಕೋಟಿ ಮಂದಿ ಮತದಾನ ಮಾಡಲಿದ್ದಾರೆ.
ಲೋಕಸಭಾ ಚುನಾವಣೆಗೆ(Lok Sabha Elections 2024) ಇಂದು ರಾಜ್ಯದಲ್ಲಿ ಎರಡನೇ ಹಂತದ ಮತದಾನ(Voting) ನಡೆಯುತ್ತಿದ್ದು, ಕಾಂಗ್ರೆಸ್(Congress) 12 ಮಂದಿ ಹಾಗೂ ಬಿಜೆಪಿ(BJP) ಐವರು ರಣಕಲಿಗಳು ಮೊದಲ ಬಾರಿಗೆ ಲೋಕಸಭಾ ಅಖಾಡಕ್ಕೆ ಧುಮುಕಿದ್ದಾರೆ. ಎಲ್ಲರೂ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಬೀದರ್ ಲೋಕಸಭಾ ಕೈ ಅಭ್ಯರ್ಥಿಯಾಗಿ ಸಚಿವ ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆ ಕಣದಲ್ಲಿದ್ದಾರೆ. 26ನೇ ವಯಸ್ಸಿಗೆ ಲೋಕಸಭೆ ಅಖಾಡಕ್ಕೆ ಧುಮುಕಿರುವ ಸಾಗರ್ ಖಂಡ್ರೆ ಮೊದಲ ಬಾರಿಗೆ ಚುನಾವಣೆ ಎದುರಿಸುತ್ತಿದ್ದಾರೆ. ಅತ್ತ ಬೆಳಗಾವಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಸ್ಪರ್ಥೆಯಲ್ಲಿದ್ದು, ಮೃಣಾಲ್ಗೆ ಲಿಂಗಾಯತ ಸಮುದಾಯ, ಅಹಿಂದ ಬಲವಿದೆ.ಎಐಸಿಸಿ ಅಧ್ಯಕ್ಷ ಖರ್ಗೆ ಅಳಿಯ ರಾಧಾಕೃಷ್ಣ ದೊಡ್ಡಮನಿ ಮೊದಲ ಬಾರಿಗೆ ಕಲಬುರಗಿಯಿಂದ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಇನ್ನೂ ವಿಜಯಪುರ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಅಲಗೂರು ಮೊದಲ ಬಾರಿಗೆ ಲೋಕಸಭೆಗೆ ಸ್ಪರ್ಧಿಸಿದ್ದು, ಸಚಿವ ಎಂ.ಬಿ ಪಾಟೀಲ್ ಅತ್ಯಾಪ್ತರಾಗಿ ಗುರುತಿಸಿಕೊಂಡಿದ್ದಾರೆ.ಬಾಗಲಕೋಟೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಚಿವ ಶಿವಾನಂದ ಪುತ್ರಿ ಸಂಯುಕ್ತಾ ಪಾಟೀಲ್ ಮೊದಲ ಬಾರಿ ಲೊಕಸಭೆ ಚುನಾವಣೆ ಎದುರಿಸುತ್ತಿದ್ದಾರೆ. ಮತ್ತೊಂದೆಡೆ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಕೂಡ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.
ಇದನ್ನೂ ವೀಕ್ಷಿಸಿ: ‘ಏನೂ ಕೇಳಬೇಡಿ, ನನಗೇನು ಗೊತ್ತಿಲ್ಲ’ ಎಸ್‌ಐಟಿ ಅಧಿಕಾರಿಗಳ ನೂರು ಪ್ರಶ್ನೆಗೆ ರೇವಣ್ಣ ಒಂದೇ ಆನ್ಸರ್!