ಚಿತ್ರದುರ್ಗ: 6.39 ಕೋಟಿ ರೂ. ಮೌಲ್ಯದ ಚಿನ್ನ, ವಜ್ರ ಜಪ್ತಿ

ತಪಾಸಣೆ ವೇಳೆ ವಾಹನದಲ್ಲಿ ದಾಖಲೆ ಇಲ್ಲದ 6.39 ಕೋಟಿ ರೂಪಾಯಿ ಮೌಲ್ಯದ ಚಿನ್ನ, ವಜ್ರ ಪತ್ತೆಯಾಗಿದ್ದು, ಅದನ್ನು ಜಪ್ತಿ ಮಾಡಲಾಗಿದೆ.

First Published May 3, 2023, 2:10 PM IST | Last Updated May 3, 2023, 2:10 PM IST

ಚಿತ್ರದುರ್ಗ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಇದರ ನಡುವೆ ಅಕ್ರಮ ಹಣ ಸಾಗಾಟ ಪ್ರಕರಣಗಳು ಎಗ್ಗಿಲ್ಲದೇ ಹೆಚ್ಚುತ್ತಿವೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕಣಕುಪ್ಪೆ ಗ್ರಾಮದ ಚೆಕ್‌ಪೋಸ್ಟ್‌ನಲ್ಲಿ, ತಪಾಸಣೆ ವೇಳೆ 6.39 ಕೋಟಿ ರೂಪಾಯಿ ಮೌಲ್ಯದ ಚಿನ್ನ, ವಜ್ರ ಜಪ್ತಿ ಮಾಡಲಾಗಿದೆ. ಬಳ್ಳಾರಿಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ವಾಹನವನ್ನು ತಪಾಸಣೆ ನಡೆಸಿದಾಗ ಸೂಕ್ತ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಚಿನ್ನ, ವಜ್ರ ಪತ್ತೆಯಾಗಿದೆ. ಇದನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

Video Top Stories