
Eshwara Khandre: ಯಾರೂ ಕಲ್ಲು ತೂರಾಟ ಮಾಡಿದ್ದಾರೊ ಅವರ ಮೇಲೆ ಕ್ರಮ ಆಗುತ್ತೆ
ಮೈಸೂರಿನ ಉದಯಗಿರಿಯಲ್ಲಿ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಸಚಿವ ಈಶ್ವರ ಖಂಡ್ರೆ, ಯಾರೂ ಕಲ್ಲು ತೂರಾಟ ಮಾಡಿದ್ದಾರೊ ಅವರ ಮೇಲೆ ಕ್ರಮ ಆಗುತ್ತೆ, ಬಿಜೆಪಿಯವರಿಗೆ ವಿನಾಕಾರಣ ಸುಳ್ಳು ಆರೋಪ ಮಾಡುವುದು ಚಾಳಿ ಆಗಿಬಿಟ್ಟಿದೆ. ಅವರೇ ಅಪರಾಧ ಮಾಡ್ತಾರೆ, ದೂರು ಕೋಡ್ತಾರೆ, ಅವರೇ ತೀರ್ಪು ಕೊಡ್ತಾರೆ ಎಂದು ಕಿಡಿಕಾರಿದ್ದಾರೆ. ಬಿಜೆಪಿಯವರಿಗೆ ಏನು ನೈತಿಕತೆ ಇದೆ? ಬಿಜೆಪಿಯವರ ಹೇಳಿಕೆಗೆ ಯಾವುದೆ ಮಹತ್ವ ನೀಡುವ ಅವಶ್ಯಕತೆ ಇಲ್ಲಾ ಎಂದು ಖಂಡ್ರೆ ಆಕ್ರೋಶ ಹೊರಹಾಕಿದ್ದಾರೆ. ಇನ್ನು ಕೆಪಿಸಿಸಿ ಅಧ್ಯಕ್ಷ ಬದಲಾವಣೆ ವಿಚಾರವಾಗಿ ಮಾತನಾಡಿದ ಖಂಡ್ರೆ, ನಾಯಕತ್ವದ ಕುರಿತಾಗಿ ಮಾತನಾಡದಂತೆ ಹೈಕಮಾಂಡ್ ಸೂಚನೆ ನೀಡಿದೆ. ಈಗಾಗಲೇ ಯಾವುದೆ ಪ್ರತಿಕ್ರಿಯೆ ನೀಡದಂತೆ ವರಿಷ್ಠರು ಸೂಚನೆ ನೀಡಿದ್ದಾರೆ, ಎಂದು ಪ್ರತಿಕ್ರಿಯೆ ನೀಡದೆ ತೆರಳಿದರು.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared