ಮಾತು ಕೊಟ್ಟಿದ್ದೇನೆ, ಇಂದಿನಿಂದ ಸಂಪೂರ್ಣವಾಗಿ ಬಿಜೆಪಿ ಪರ ಪ್ರಚಾರ: ಸುದೀಪ್

ನಟ ಕಿಚ್ಚ ಸುದೀಪ್  ಚುನಾವಣಾ ಪ್ರಚಾರಕ್ಕಿಳಿದಿದ್ದಾರೆ.  ಸಿಎಂ ಬೊಮ್ಮಾಯಿ ಅವರು ಹೇಳುವ ಎಲ್ಲ ಬಿಜೆಪಿ ಅಭ್ಯರ್ಥಿಗಳ ಪ್ರಚಾರ ಮಾಡುವುದಾಗಿ ತಿಳಿಸಿದ್ದಾರೆ. 

Share this Video
  • FB
  • Linkdin
  • Whatsapp

ನಟ ಕಿಚ್ಚ ಸುದೀಪ್ ಚುನಾವಣಾ ಪ್ರಚಾರಕ್ಕಿಳಿದಿದ್ದಾರೆ. ಸಿಎಂ ಬೊಮ್ಮಾಯಿ ಅವರು ಹೇಳುವ ಎಲ್ಲ ಬಿಜೆಪಿ ಅಭ್ಯರ್ಥಿಗಳ ಪ್ರಚಾರ ಮಾಡುವುದಾಗಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸುದೀಪ್ ಅವರು, ಮಾತು ಕೊಟ್ಟಿದ್ದೇನೆ, ಚುನಾವಣೆ ಪ್ರಚಾರ ಕಾರ್ಯ ಮುಗಿಯುವವರೆಗೂ ಬಿಜೆಪಿ ಜೊತೆಯಲ್ಲಿ ಇರುತ್ತೇನೆ.ಪ್ರಚಾರಕ್ಕೆ ಹೋದಲ್ಲಿ ಜನ ತುಂಬಾ ಪ್ರೀತಿ ತೋರಿಸುತ್ತಿದ್ದಾರೆ, ಪ್ರಚಾರಕ್ಕೆ ಹೋಗುವುದರಲ್ಲಿ ನನ್ನ ಸ್ವಾರ್ಥ ಕೂಡ ಇದೆ, ಈ ನೆಪದಲ್ಲಿ ಅಭಿಮಾನಿಗಳನ್ನು ಭೇಟಿ ಮಾಡಬಹುದು ಎಂದು ತಿಳಿಸಿದರು.ಅದಲ್ಲದೆ ರೋಡ್‌ ಶೋಗಳಲ್ಲಿ ಭಾಗವಹಿಸಿ ತುಂಬಾ ವರ್ಷಗಳಾಗಿದೆ, ಹೆಬ್ಬುಲಿ ಚಲನಚಿತ್ರ ಬಿಡುಗಡೆ ಸಂದರ್ಭದಲ್ಲಿ ರೋಡ್‌ ಶೋ ಮಾಡಿದ್ದು ಕೊನೆಯಾಗಿತ್ತು, ಇಂದಿನಿಂದ ಸಂಪೂರ್ಣವಾಗಿ ಪ್ರಚಾರದಲ್ಲಿ ತೊಡಗಿಸಿಕೊಳ್ಳುತ್ತೇನೆ ,ಚುನಾವಣಾ ಅಭ್ಯರ್ಥಿಗಳಿಗೆ ಒಳ್ಳೆಯದಾಗಲಿ ಎಂದು ಹೇಳಿದರು.

Related Video