ರಾಜ್ಯ ವಿಧಾನಸಭೆ ಚುನಾವಣೆಗೆ ಮತದಾನ ಮಾಡಿದ ನಟಿ ಲೀಲಾವತಿ

ನಟಿ ಲೀಲಾವತಿ  ಮತದಾನ ಮಾಡುವ ಮೂಲಕ ಜಾಗೃತಿ ಮೂಡಿಸಿದ್ದಾರೆ. ಮೇ 10ರಂದು ಮತದಾನ ದಿನಾಂಕ ಘೋಷಣೆ ಆಗಿದ್ದರೂ, ಆಯೋಗ ಹಿರಿಯ ನಾಗರಿಕರಿಗೆ ವಿಶೇಷ ಸೌಲಭ್ಯ  ನೀಡಿದೆ.

First Published Apr 29, 2023, 3:52 PM IST | Last Updated Apr 29, 2023, 3:54 PM IST

ನಟಿ ಲೀಲಾವತಿ  ಮತದಾನ ಮಾಡುವ ಮೂಲಕ ಜಾಗೃತಿ ಮೂಡಿಸಿದ್ದಾರೆ. ಮೇ 10ರಂದು ಮತದಾನ ದಿನಾಂಕ ಘೋಷಣೆ ಆಗಿದ್ದರೂ, ಆಯೋಗ ಹಿರಿಯ ನಾಗರಿಕರಿಗೆ ವಿಶೇಷ ಸೌಲಭ್ಯ  ನೀಡಿದ್ದು,.ಎಂಭತ್ತು ವರ್ಷ ತುಂಬಿದ ನಾಗರಿಕರಿಗೆ ಮನೆಯಲ್ಲೇ ಮತದಾನ ಮಾಡುವ ಅವಕಾಶ ಕಲ್ಪಿಸಿದೆ. ಹೀಗಾಗಿ ನಟಿ  ಲೀಲಾವತಿ ಅವರು ಇಂದು ಮತದಾನ ಮಾಡಿದ್ದಾರೆ. ಈ ಬಾರಿಯ ಮತದಾನ ಮಾಡಿದ ಮೊದಲ ನಟಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ನೆಲಮಂಗಲದ ತಮ್ಮ ಮನೆಯಲ್ಲಿ ಚುನಾವಣಾ ಅಧಿಕಾರಿಗಳ ಸಮ್ಮುಖದಲ್ಲಿ ಮತದಾನ ಮಾಡಿದ್ದಾರೆ. ನಂತರ ಮಾತನಾಡಿದ ಅವರು ವೋಟ್‌ ಮಾಡಿದ್ದು ನನಗೆ ಸಂತೋಷವಾಗಿದೆ. 
ಎಲ್ಲರೂ ವೋಟ್‌ ಮಾಡಿ, ಇದು ಕರ್ತವ್ಯ ಎಂದು ಭಾವಿಸಿ ಎಂದು ಹೇಳಿದರು.
 

Video Top Stories