ಕೋಡಿಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದ ಕೃಷಿ ಸಚಿವ ಚಲುವರಾಯಸ್ವಾಮಿ ದಂಪತಿ

ಹಾಸನ ಜಿಲ್ಲೆ, ಅರಸೀಕೆರೆ ತಾಲ್ಲೂಕಿನ, ಹಾರನಹಳ್ಳಿ ಗ್ರಾಮದಲ್ಲಿರುವ ಶ್ರೀ ಕ್ಷೇತ್ರ ಕೋಡಿಮಠಕ್ಕೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.

Share this Video
  • FB
  • Linkdin
  • Whatsapp

ಹಾಸನ (ಆ.16): ಹಾಸನ ಜಿಲ್ಲೆ, ಅರಸೀಕೆರೆ ತಾಲ್ಲೂಕಿನ, ಹಾರನಹಳ್ಳಿ ಗ್ರಾಮದಲ್ಲಿರುವ ಶ್ರೀ ಕ್ಷೇತ್ರ ಕೋಡಿಮಠಕ್ಕೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಅಮಾವಾಸ್ಯೆ ದಿನದಂದು ಪತ್ನಿ ಧನಲಕ್ಷ್ಮಿ ಜೊತೆಗೆ ಕೋಡಿಮಠಕ್ಕೆ ಭೇಟಿ ನೀಡಿದ ಕೃಷಿ ಸಚಿವ ಚೆಲುವರಾಯಸ್ವಾಮಿ ತಮ್ಮ ಕುಟುಂಬಕ್ಕೆ ಅಭಯ ಕೇಳಿಕೊಂಡಿದ್ದಾರೆ. ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಯನ್ನು ಭೇಟಿ ಮಾಡಿದ ಬಗ್ಗೆ ರಾಜಕೀಯ ಕುರಿತಂತೆ ಯಾವುದೇ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ. ಇನ್ನು ರಾಜ್ಯದಲ್ಲಿ ಚಲುವರಾಯಸ್ವಾಮಿ ವಿರುದ್ಧ ಹಲವು ಆರೋಪಗಳು ಕೇಳಿಬಂದಿದ್ದು, ಸಚಿವ ಸ್ಥಾನಕ್ಕೆ ಕುತ್ತು ಬಂದಂತಾಗಿತ್ತು. ಇದರ ಬೆನ್ನಲ್ಲೇ ಎಲ್ಲ ಆರೋಪಗಳು ಸುಳ್ಳೆಂದು ಸಾಬೀತು ಮಾಡಿದ್ದಾರೆ. ಇದರ ಬೆನ್ನಲ್ಲಿಯೇ ಕೋಡಿ ಶ್ರೀಗಳನ್ನು ಕುಟುಂಬ ಸಮೇತರಾಗಿ ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

Related Video